Thursday, June 4, 2026
Homeಕರಾವಳಿನೆಲ್ಯಾಡಿ:ಧರ್ಮಸ್ಥಳಕ್ಕೆ ಮದುವೆಗೆ ಹೋಗುತ್ತಿದ್ದ ಖಾಸಗಿ ಬಸ್ ಅಪಘಾತ

ನೆಲ್ಯಾಡಿ:ಧರ್ಮಸ್ಥಳಕ್ಕೆ ಮದುವೆಗೆ ಹೋಗುತ್ತಿದ್ದ ಖಾಸಗಿ ಬಸ್ ಅಪಘಾತ

- Advertisement -
- Advertisement -

ನೆಲ್ಯಾಡಿ:ಧರ್ಮಸ್ಥಳಕ್ಕೆ ಮದುವೆ ಹೋಗುತ್ತಿದ್ದ ಖಾಸಗಿ ಬಸ್ ಅಪಘಾತವಾಗಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ  ಉದನೆ ಎಂಬಲ್ಲಿ  ನಡೆದಿದೆ.  ಖಾಸಗಿ ಬಸ್ ಹಾಗೂ ಕಂಟೆನರ್ ನಡುವೆ ಅಪಘಾತ ಸಂಭವಿಸಿದ್ದು ಹಲವರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪಿರಿಯಾಪಟ್ಟಣದಿಂದ ಧರ್ಮಸ್ಥಳಕ್ಕೆ ಮದುವೆಗೆ ಹೋಗುತ್ತಿದ್ದ ಬಸ್ ಇದಾಗಿದ್ದು ಇನ್ನೊಂದು ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಈ ಅಪಘಾತ ಸಂಭವಿಸಿದೆ.ವರನ ಕಡೆಯವರ ಬಸ್ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

- Advertisement -

Latest News

error: Content is protected !!