Friday, June 26, 2026
Homeಕರಾವಳಿಮಂಗಳೂರುಉಡುಪಿ:ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಸುಟ್ಟು ಕರಕಲಾದ ಖಾಸಗಿ ಬಸ್

ಉಡುಪಿ:ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಸುಟ್ಟು ಕರಕಲಾದ ಖಾಸಗಿ ಬಸ್

- Advertisement -
- Advertisement -

ಉಡುಪಿ:ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಖಾಸಗಿ ಬಸ್ ಸುಟ್ಟು ಕರಕಲಾದ ಘಟನೆ ಹುಲಿಕಲ್-ಬಾಳೆಬರೆ ಘಾಟಿ ಮಾರ್ಗದಲ್ಲಿ ಶನಿವಾರ ಮಧ್ಯಾಹ್ನ ಸಂಭವಿಸಿದೆ.

ಕುಂದಾಪುರದಿಂದ‌ ಶಿವಮೊಗ್ಗದತ್ತ ತೆರಳುತ್ತಿದ್ದ ಖಾಸಗಿ ಬಸ್ ನ ಇಂಜಿನ್ ಭಾಗದಲ್ಲಿ ಹೊಗೆ ಕಾಣಿಸಿಕೊಂಡ ಬಳಿಕ ಹಠಾತ್ತನೆ ಬೆಂಕಿ‌ ಹೊತ್ತಿ ಉರಿದಿದೆ‌. ಅಪಾಯದ ಮುನ್ಸೂಚನೆ ಅರಿತ ಚಾಲಕ ಹಾಗೂ ನಿರ್ವಾಹಕರು ಕೂಡಲೇ ಪ್ರಯಾಣಿಕರನ್ನು ಕೆಳಗೆ ಇಳಿಸಿದ್ದರಿಂದ ಪ್ರಯಾಣಿಕರಿಗೆ ಯಾವುದೇ ತೊಂದರೆಗಳಾಗಿಲ್ಲ‌.

ಬಸ್ ಗೆ ಬೆಂಕಿ ಹತ್ತಿಕೊಂಡ ವಿಡಿಯೋ ದೃಶ್ಯಾವಳಿ‌ ವೈರಲ್‌ ಆಗಿದ್ದು, ಇಡೀ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ‌.

- Advertisement -

Latest News

error: Content is protected !!