Thursday, June 4, 2026
Homeಕರಾವಳಿಮಂಗಳೂರುಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ; ಓರ್ವ ಸಾವು,...

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ; ಓರ್ವ ಸಾವು, 18 ಪ್ರಯಾಣಿಕರಿಗೆ ಗಾಯ

- Advertisement -
- Advertisement -

ಅಂಕೋಲಾ ; ಚಾಲಕನ ನಿಯಂತ್ರಣ ತಪ್ಪಿ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಹಳ್ಳಕ್ಕೆ ಬಿದ್ದು ಓರ್ವ ಸಾವನ್ನಪ್ಪಿ 18 ಪ್ರಯಾಣಿಕರು ಗಾಯಗೊಂಡ ಘಟನೆ ಅಂಕೋಲಾದಲ್ಲಿ ನಡೆದಿದೆ.

ಬೆಳಗಾವಿಯಿಂದ ಮಂಗಳೂರಿಗೆ ಅಂಕೋಲಾ ಮಾರ್ಗವಾಗಿ ಬರುತ್ದಿದ್ದ ಖಾಸಗಿ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಕಿರುಸೇತುವೆಯಿಂದ ಹಳ್ಳಕ್ಕೆ ಬಿದ್ದಿದೆ. ಅಪಘಾತದಲ್ಲಿ ಓರ್ವ ಸಾವನಪ್ಪಿದ್ದು, 18 ಮಂದಿ ಪ್ರಯಾಣಿಕರಿಗೆ ಗಾಯಗಳಾಗಿದೆ.
ನಸುಕಿನ 2 ಗಂಟೆಗೆ ಸುಮಾರಿಗೆ ದುರ್ಘಟನೆ ಸಂಭವಿಸಿದ್ದು, ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 18 ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಇನ್ನೂ ಗಂಭೀರ ಗಾಯಗೊಂಡ 5 ಜನರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಕಾರವಾರ ಮತ್ತು ಮಂಗಳೂರಿನ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ಅಂಕೋಲಾ ಠಾಣೆ ಪೊಲೀಸರು ತಿಳಿಸಿದ್ದಾರೆ.

- Advertisement -

Latest News

error: Content is protected !!