Monday, July 13, 2026
Homeಅಪರಾಧಬಸ್‌ನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಖಾಸಗಿ ಬಸ್ ಕಂಡಕ್ಟರ್ ಪೊಲೀಸ್‌ ವಶಕ್ಕೆ

ಬಸ್‌ನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಖಾಸಗಿ ಬಸ್ ಕಂಡಕ್ಟರ್ ಪೊಲೀಸ್‌ ವಶಕ್ಕೆ

- Advertisement -
- Advertisement -

ಮಂಗಳೂರು-ವಿಟ್ಲ ಮಾರ್ಗದ ‘ಸೆಲೇನ’ ಖಾಸಗಿ ಬಸ್‌ನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಕಂಡಕ್ಟರ್ ಇರ್ಫಾನ್ (32) ಎಂಬಾತನನ್ನು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಮೂಲತಃ ಉಪ್ಪಿನಂಗಡಿಯ ಕಲ್ಲೇರಿ ನಿವಾಸಿಯಾದ ಈತ, ಜುಲೈ 9, 2026ರಂದು ಸಂಜೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯರೆದುರು ತನ್ನ ಗುಪ್ತಾಂಗ ಪ್ರದರ್ಶಿಸಿ ಅಸಭ್ಯ ಸನ್ನೆಗಳನ್ನು ಮಾಡಿದ್ದಲ್ಲದೆ, “ಹಿಂದಿನ ಸೀಟಿಗೆ ಬಾ” ಎಂದು ಕರೆದು ವಿಕೃತಿ ಮೆರೆದಿದ್ದನು.

ಈ ಘಟನೆಯಿಂದ ಬೇಸತ್ತ ವಿದ್ಯಾರ್ಥಿನಿಯರು ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಜುಲೈ 10ರಂದು ಆರೋಪಿಯನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

- Advertisement -

Latest News

error: Content is protected !!