Wednesday, July 15, 2026
Homeಕರಾವಳಿಬೈಕ್‌ ಗೆ ಢಿಕ್ಕಿ ಹೊಡೆದ ಖಾಸಗಿ ಬಸ್;‌ ಬೈಕ್‌ ಸವಾರ ಗಂಭೀರ

ಬೈಕ್‌ ಗೆ ಢಿಕ್ಕಿ ಹೊಡೆದ ಖಾಸಗಿ ಬಸ್;‌ ಬೈಕ್‌ ಸವಾರ ಗಂಭೀರ

- Advertisement -
- Advertisement -

ಬಂಟ್ವಾಳ: ವಿಟ್ಲದಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ವಿಟ್ಲ ಸಮೀಪದ ಚಂದಳಿಕೆಯಲ್ಲಿ ಸಂಭವಿಸಿದೆ.

ಗಾಯಗೊಂಡ ಬೈಕ್ ಸವಾರ ಪೆರುವಾಯಿ ನಿವಾಸಿ ಅರ್ಚಕ ಹರ್ಷ ಭಟ್ ಎನ್ನಲಾಗಿದ್ದು, ಇವರು ಪುತ್ತೂರು ಕಡೆಯಿಂದ ಬೈಕ್‌ ನಲ್ಲಿ ಹೋಗುತ್ತಿದ್ದು, ವಿಟ್ಲದಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ ಅತಿವೇಗವಾಗಿ ಬೈಕನ್ನು ಓವರ್‌ಟೇಕ್ ಮಾಡುವಾಗ ಢಿಕ್ಕಿ ಹೊಡೆದಿದೆ. ಇದರ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುವನ್ನು ತಕ್ಷಣವೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!