Wednesday, June 24, 2026
Homeಕರಾವಳಿಉಡುಪಿಉಡುಪಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ನಾಗಮಂಗಲ ಬಳಿ ಬೆಂಕಿಗೆ ಆಹುತಿ

ಉಡುಪಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ನಾಗಮಂಗಲ ಬಳಿ ಬೆಂಕಿಗೆ ಆಹುತಿ

- Advertisement -
- Advertisement -

ಮಂಡ್ಯ: ಉಡುಪಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಹೈವೇಯಲ್ಲೇ ಹೊತ್ತಿ ಉರಿದ ಘಟನೆ ನಡೆದಿದೆ.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕಡಬಹಳ್ಳಿ ಬೆಂಗಳೂರು-ಮಂಗಳೂರು ಹೈವೇಯಲ್ಲಿ ಈ ಅವಘಡ ಸಂಭವಿಸಿದೆ.

ಬೆಳಗ್ಗೆ 5 ಗಂಟೆಗೆ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ವೇಳೆ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಚಾಲಕ ಮತ್ತು ನಿರ್ವಾಹಕ ಬಸ್ ನಲ್ಲಿದ್ದ ಪ್ರಯಾಣಿಕರನ್ನು ಕೆಳಗೆ ಇಳಿಸಿದ್ದಾರೆ.

ಬಸ್ ನಿಲ್ಲಿಸುತ್ತಿದ್ದಂತೆಯೇ ಬೆಂಕಿ ಪೂರ್ತಿ ಆವರಿಸಿಕೊಂಡಿದ್ದು, ನಂತರ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಬಸ್ ನಲ್ಲಿ ಒಟ್ಟು ಇಪ್ಪತ್ತೈದು ಪ್ರಯಾಣಿಕರಿದ್ದರು.

- Advertisement -

Latest News

error: Content is protected !!