ಉಡುಪಿ; ಜುಲೈ 31 ರಂದು ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾಗ ವಿದ್ಯಾರ್ಥಿನಿಗೆ ಎದೆನೋವು ಕಾಣಿಸಿಕೊಂಡಿದ್ದರಿಂದ ಬಸ್ ನಲ್ಲಿ ಸ್ಟೂಡೆಂಟ್ ಅನ್ನು ಆಸ್ಪತ್ರೆಗೆ ಶಿಫ್ಟ್ ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿತ್ತು. ಬಳಿಕ ಆಕೆಯನ್ನು ತಕ್ಷಣವೇ ಬಸ್ ಚಾಲಕ ಗಜೇಂದ್ರ ಕುಂದರ್ ಮತ್ತು ಕಂಡಕ್ಟರ್ ಮಹೇಶ್ ಪೂಜಾರಿ ಬಸ್ ಅನ್ನು ತುರ್ತು ವಾಹನವನ್ನಾಗಿ ಪರಿವರ್ತಿಸಿ ಆಕೆಯನ್ನು ಕೇವಲ 6 ಕಿಲೋ ಮೀಟರ್ ದೂರದಲ್ಲಿದ್ದ ಆಸ್ಪತ್ರೆಗೆ 6 ನಿಮಿಷದಲ್ಲಿ ದಾಖಲಿಸಿ ಆಕೆಯ ಜೀವ ಉಳಿಸಿದ್ದರು. ಇದೀಗ ಅಂತಹದ್ದೇ ಘಟನೆ ಉಡುಪಿಯಲ್ಲಿ ನಡೆದಿದೆ.
ಇಂದು (ಆಗಸ್ಟ್ 5) ರ ಬೆಳಿಗ್ಗೆ ಶಿರ್ವ ದಿಂದ ಉಡುಪಿಗೆ ನವೀನ್ ಬಸ್ಸಿನಲ್ಲಿ ಉಡುಪಿಗೆ ಬರುತ್ತಿದ್ದ ಯುವತಿ ಉಡುಪಿಯ ಹಳೆ ತಾಲ್ಲೂಕು ಕಚೇರಿಗೆ ಬರುತ್ತಿದ್ದಂತೆ ಬಸ್ಸಿನಲ್ಲೇ ವಾಂತಿ ಮಾಡಿ ಅಸ್ವಸ್ಥಗೊಂಡಿದ್ದಾಳೆ . ಕೂಡಲೇ ಎಚ್ಚೆತ್ತ ನವೀನ್ ಬಸ್ ನ ಚಾಲಕ ಶಶಿಕಾಂತ್, ನಿರ್ವಾಹಕ ಸಲೀಂ ಬಸ್ಸನ್ನು ತಕ್ಷಣವೇ ಟಿಎಂಎ ಪೈ ಆಸ್ಪತ್ರೆಗೆ ಕೊಂಡೊಯ್ದ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿ ಜೊತೆಗೆ ಯುವತಿಯ ಮನೆಯವರಿಗೆ ಮಾಹಿತಿ ನೀಡಿ ಮನೆಯವರು ಬರುವ ತನಕ ಯುವತಿಗೆ ಚಿಕಿತ್ಸೆಗೆ ನೀಡಿದ್ದಾರೆ. ಬಳಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ.