- Advertisement -


- Advertisement -
ಬೆಳ್ತಂಗಡಿ: ಉಜಿರೆಯಲ್ಲಿ ಖಾಸಗಿ ಸುದ್ದಿವಾಹಿನಿ ತಂಡದ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಹಲ್ಲೆ ನಡೆಸಿದವರ ವಿರುದ್ದ ಎಫ್ಐಆರ್ ದಾಖಲಾಗಿದೆ.
ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಸಮೀರ್ ಎಂ.ಡಿ, ಜಯಂತ್ ಟಿ ಸೇರಿ ಹಲವರ ವಿರುದ್ದ ಎಫ್ಐಆರ್ ದಾಖಲಾಗಿದೆ. ನಿನ್ನೆ ರಾತ್ರಿ ಉಜಿರೆಯ ಬೆನಕ ಆಸ್ಪತ್ರೆಗೆ ಧರ್ಮಸ್ಥಳದಲ್ಲಿ ಯೂ ಟ್ಯೂಬರ್ಸ್ ಮೇಲೆ ನಡೆದಿದ್ದ ಹಲ್ಲೆ ವಿಚಾರದ ವರದಿಗಾಗಿ ವರದಿಗಾರ ಹರೀಶ್ ಹಾಗೂ ಕ್ಯಾಮರಾಮೆನ್ ನವೀನ್ ಪೂಜಾರಿ ತೆರಳಿದ್ದರು. ಇಬ್ಬರ ಮೇಲೆ ಇಬ್ಬರ ಮೇಲೂ ಹಲ್ಲೆ ನಡೆಸಿದ್ದ ಮಹೇಶ್ ಶೆಟ್ಟಿ ತಿಮರೋಡಿ ಗ್ಯಾಂಗ್ ಮಾಡಿದೆ ಎಂದು ಆರೋಪಿಸಲಾಗಿದ್ದು ಈ ಬಗ್ಗೆ ವರದಿಗಾರ ಹರೀಶ್ ನೀಡಿದ ದೂರಿನಡಿ ಬಿಎನ್ಎಸ್ 115(2), 189(2), 191(2), 351(2), 352, 190 ಸೆಕ್ಷನ್ ಗಳಡಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
- Advertisement -


