Tuesday, April 30, 2024
Homeಅಪರಾಧವಿಧಾನಸೌಧದ ಆವರಣದಲ್ಲಿ ಪಾಕ್ ಪರ ಘೋಷಣೆ ಪ್ರಕರಣ: ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

ವಿಧಾನಸೌಧದ ಆವರಣದಲ್ಲಿ ಪಾಕ್ ಪರ ಘೋಷಣೆ ಪ್ರಕರಣ: ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

spot_img
- Advertisement -
- Advertisement -

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರಾಗಿದೆ. ಬೆಂಗಳೂರಿನ 39ನೇ ಎಸಿಎಂಎಂ ಕೋರ್ಟ್​​ನಿಂದ ನ್ಯಾಯಾಧೀಶ ವಿ. ವಿಜೇತ್, ಆರೋಪಿಗಳಾದ ದೆಹಲಿಯ ಕಿಶನ್ ಗಂಜಿನ ಮೊಹಮ್ಮದ್ ಇಲ್ತಾಜ್, ಹಾವೇರಿ ಜಿಲ್ಲೆ ಬ್ಯಾಡಗಿಯ ಮೊಹಮ್ಮದ್ ಶಫಿ ನಾಶಿಪುಡಿ ಹಾಗೂ ಬೆಂಗಳೂರಿನ ಜಯಮಹಲ್ ನಿವಾಸಿ ಡಿ.ಎಸ್.ಮುನಾವರ್ ಅಹ್ಮದ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ತಿರಸ್ಕರಿಸಿ, ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ.

ಜಾಮೀನಿನಲ್ಲಿರುವ ಷರತ್ತುಗಳು: 1 ಲಕ್ಷ ರೂ. ಮೊತ್ತದ ಮುಚ್ಚಳಿಕೆಯನ್ನು ಆರೋಪಿಗಳು ನೀಡಬೇಕು. ಜೊತೆಗೆ ಇಬ್ಬರು ವ್ಯಕ್ತಿಗಳು ಜಾಮೀನು ಒದಗಿಸಬೇಕು. ಯಾವುದೇ ಕಾರಣಕ್ಕೆ ಆರೋಪಿಗಳು ಭಾರತ ಬಿಟ್ಟು ಹೋಗಬಾರದು. ನ್ಯಾಯಾಲಯದ ವಿಚಾರಣಾ ಕರೆಗಳಿಗೆ ಹಾಜರಾಗಬೇಕು ಮತ್ತು ಮುಂದೆ ಇಂತಹ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಬಾರದು.

ವಿಚಾರಣೆ ವೇಳೆ ಆರೋಪಿಗಳ ಪರ ವಕೀಲರು, ‘ಆರೋಪಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸುವ ಮುನ್ನ ಪೂರ್ವಾನುಮತಿ ಪಡೆದಿಲ್ಲ. ಆರೋಪಿಗಳಿಗೆ ಸಿಆರ್‌ಪಿಸಿ ಕಲಂ 41ರ ಅನ್ವಯ ನೋಟಿಸ್ ನೀಡಿಲ್ಲ. ಹಾಗೂ ಆರೋಪಿಸಲಾದ ಘೋಷಣೆಯ ಮಾದರಿಯನ್ನು ಧ್ವನಿ ಪರೀಕ್ಷೆಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಹಾಗಾಗಿ, ಇದು ಮೇಲ್ನೋಟಕ್ಕೆ ಸಾಕ್ಷ್ಯವೇ ಇಲ್ಲದ ಪ್ರಕರಣ ಎಂಬುದು ಸಾಬೀತಾಗುತ್ತದೆ’ ಎಂಬ ಅಂಶಗಳನ್ನು ನ್ಯಾಯಾಲಯದ ಮುಂದಿಟ್ಟು ವಾದ ಮಂಡಿಸಿದ್ದರು.

- Advertisement -
spot_img

Latest News

error: Content is protected !!