Thursday, June 4, 2026
Homeತಾಜಾ ಸುದ್ದಿಸ್ಯಾಂಡಲ್ ವುಡ್ ಗೆ ಮತ್ತೊಂದು ಆಘಾತ: ಮತ್ತೊರ್ವ ನಿರ್ಮಾಪಕ ಕೊರೊನಾ ಸೋಂಕಿಗೆ ಬಲಿ

ಸ್ಯಾಂಡಲ್ ವುಡ್ ಗೆ ಮತ್ತೊಂದು ಆಘಾತ: ಮತ್ತೊರ್ವ ನಿರ್ಮಾಪಕ ಕೊರೊನಾ ಸೋಂಕಿಗೆ ಬಲಿ

- Advertisement -
- Advertisement -

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಮತ್ತೊಂದು ಆಘಾತ ಎದುರಾಗಿದೆ. ನಿರ್ಮಾಪಕ ಚಂದ್ರಶೇಖರ್ ಶ್ವಾಸಕೋಶ ತೊಂದರೆಯಿಂದ ಮೃತಪಟ್ಟಿದ್ದಾರೆ.

ಎರಡು ದಿನಗಳ ಹಿಂದೆಯಷ್ಟೇ ಕೋಟಿ ನಿರ್ಮಾಪಕ ರಾಮು ಮೃತಪಟ್ಟಿದ್ದರು. ನಿನ್ನೆ ನಿರ್ಮಾಪಕ ಚಂದ್ರಶೇಖರ್ ಮೃತಪಟ್ಟಿದ್ದಾರೆ. ‘ಅಣ್ಣಯ್ಯ’, ‘ಬಿಂದಾಸ್’, ‘ರನ್ನ’ ಮೊದಲಾದ ಸಿನಿಮಾಗಳನ್ನು ನಿರ್ಮಿಸಿದ್ದ ಚಂದ್ರಶೇಖರ್ ಅವರಿಗೆ 23 ದಿನಗಳ ಹಿಂದೆ ಕೋವಿಡ್ ಪಾಸಿಟಿವ್ ಬಂದಿತ್ತು. ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಗುಣಮುಖರಾಗಿ ಮನೆಗೆ ಮರಳಿದ್ದ ಅವರಿಗೆ ಶ್ವಾಸಕೋಶದ ಸಮಸ್ಯೆ ಉಲ್ಬಣಗೊಂಡು ಮೃತಪಟ್ಟಿದ್ದಾರೆ. ಇಂದು ಅಂತ್ಯಕ್ರಿಯೆ ನಡೆಯಲಿದೆ ಎನ್ನಲಾಗಿದೆ.

- Advertisement -

Latest News

error: Content is protected !!