- Advertisement -
![]()
- Advertisement -
ಬೆಂಗಳೂರು: ಬಿಜೆಪಿ ಪರಿಷತ್ ಸದಸ್ಯ ಸಿಟಿ ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎನ್ನುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.
ಸಿಟಿ ರವಿ ಎಫ್‌ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ಹೈಕೋರ್ಟ್‌ನಲ್ಲಿ ನಡೆದಿದ್ದು, ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಪೀಠ ತನಿಖೆಯ ವ್ಯಾಪ್ತಿಯ ಪ್ರಶ್ನೆಯನ್ನು ತೀರ್ಮಾನಿಸಬೇಕಿದೆ ಎಂದು ಅಭಿಪ್ರಾಯಪಟ್ಟು ಫೆ.20 ರವರೆಗೆ ಮಧ್ಯಂತರ ತಡೆ ನೀಡಿ ದೂರುದಾರೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ನೋಟಿಸ್ ಜಾರಿ ಮಾಡಿದೆ.
ಪ್ರಭುಲಿಂಗ ನಾವದಗಿ ಸಿಟಿ ರವಿ ಪರ ವಾದ ಮಂಡಿಸಿ, ಸದನದೊಳಗೆ ಭೀತಿರಹಿತವಾಗಿ ಮಾತನಾಡಲು ಅವಕಾಶವಿದೆ. ಮಾನನಷ್ಟ ಪ್ರಕರಣದ ಭೀತಿಯಿಲ್ಲದೇ ಚರ್ಚೆ ನಡೆಸಬಹುದು. ಮಹಿಳೆ ಗೌರವಕ್ಕೆ ಧಕ್ಕೆಯಾಗುವ ಮಾತುಗಳಿದ್ದರೂ ಸಭಾಪತಿ ಕ್ರಮ ಕೈಗೊಳ್ಳಬಹುದು ಎಂದು ಹೇಳಿದರು.
- Advertisement -


