Tuesday, June 30, 2026
Homeತಾಜಾ ಸುದ್ದಿಪ್ರಗತಿಪರ ಚಿಂತಕ, ಹಿರಿಯ ಚಿತ್ರಕಲಾವಿದ ಕೆ.ಟಿ. ಶಿವಪ್ರಸಾದ್ ನಿಧನ

ಪ್ರಗತಿಪರ ಚಿಂತಕ, ಹಿರಿಯ ಚಿತ್ರಕಲಾವಿದ ಕೆ.ಟಿ. ಶಿವಪ್ರಸಾದ್ ನಿಧನ

- Advertisement -
- Advertisement -

ಬೆಂಗಳೂರು: ಅಂತರರಾಷ್ಟ್ರೀಯ ಖ್ಯಾತಿಯ ಪ್ರಗತಿಪರ ಚಿಂತಕ ಹಾಗೂ ಹಿರಿಯ ಚಿತ್ರಕಲಾವಿದ ಕೆ.ಟಿ. ಶಿವಪ್ರಸಾದ್ (79) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಪ್ರಸಿದ್ಧ ಉದ್ಯಮಿ ಕಾರ್ಲೆ ಅವರ ಪುತ್ರರಾದ ಇವರು, ನಾಡಿನ ಹೆಮ್ಮೆಯ ಸಾಹಿತಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಆಪ್ತ ಸ್ನೇಹಿತರಾಗಿದ್ದರು. ಕಿಡ್ನಿ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಶಿವಪ್ರಸಾದ್ ಅವರು ಇತ್ತೀಚೆಗೆ ದೀರ್ಘ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಇವರ ನಿಧನಕ್ಕೆ ತೀವ್ರ ಕಂಬನಿ ಮಿಡಿದಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು, ಶಿವಪ್ರಸಾದ್ ಅವರು ಕೇವಲ ಕಲಾಪ್ರತಿಭೆಯಷ್ಟೇ ಅಲ್ಲದೆ ಸಾಮಾಜಿಕ ಚಿಂತನೆಗಳನ್ನು ಕಲೆಯ ಮೂಲಕ ಸಾರಿದ ಅಪರೂಪದ ಸೃಜನಶೀಲ ವ್ಯಕ್ತಿಯಾಗಿದ್ದರು ಎಂದು ಸ್ಮರಿಸಿದ್ದಾರೆ.

ಇವರ ಅಗಲಿಕೆಯಿಂದ ಕರ್ನಾಟಕದ ಸಾಂಸ್ಕೃತಿಕ ಮತ್ತು ಕಲಾ ಲೋಕಕ್ಕೆ ತುಂಬಲಾರದ ನಷ್ಟವಾಗಿದ್ದು, ಭಗವಂತನು ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

- Advertisement -

Latest News

error: Content is protected !!