Wednesday, May 15, 2024
Homeತಾಜಾ ಸುದ್ದಿವಿಧಾನ ಪರಿಷತ್‍ನಲ್ಲಿ ಮತಾಂತರ ನಿಷೇಧ ವಿಧೇಯಕ ಅಂಗೀಕಾರ

ವಿಧಾನ ಪರಿಷತ್‍ನಲ್ಲಿ ಮತಾಂತರ ನಿಷೇಧ ವಿಧೇಯಕ ಅಂಗೀಕಾರ

spot_img
- Advertisement -
- Advertisement -

ಬೆಂಗಳೂರು: ವಿಧಾನ ಪರಿಷತ್‍ನಲ್ಲಿ ಧ್ವನಿ ಮತದ ಮೂಲಕ ಮತಾಂತರ ನಿಷೇಧ ವಿಧೇಯಕ ಅಂಗೀಕಾರ ಮಾಡಲಾಗಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ವಿಧಾನ ಪರಿಷತ್​ನಲ್ಲಿ ಇಂದು ಮತಾಂತರ ನಿಷೇಧ ಕಾಯ್ದೆ ಮಂಡನೆ ಮಾಡಿದರು.  ಇದೇ ವೇಳೆ ಮಾತನಾಡಿದ ಅವರು ಇದು ಬಹಳ ಮಹತ್ವದ ಕಾಯ್ದೆಯನ್ನ ಸರ್ಕಾರ ತಂದಿದೆ.

2013 ರಲ್ಲಿ ಕಾಂಗ್ರೆಸ್‌ ಸರ್ಕಾರ ಇದ್ದಾಗಲೂ ಇದರ ಬಗ್ಗೆ ಚಿಂತನೆ ನಡೆಸಿತ್ತು. ಎಲ್ಲರಿಗೂ ಅವರವರ ಧಾರ್ಮಿಕ ಹಕ್ಕಿನಲ್ಲಿ ಬದುಕುವ ಅವಕಾಶ ವಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಬಲವಂತದಿಂದ, ಆಮೀಷದ ಮತಾಂತರ ನಡೆಯುತ್ತಿದೆ. ನಮ್ಮ ಶಾಸಕರೇ ಕಳೆದ ಬಾರಿ ವಿಧಾನ ಸಭೆಯಲ್ಲಿ ಹೇಳಿದ್ರು ನನ್ನ ತಾಯಿಯನ್ನೆ ಮತಾಂತರ ಮಾಡಲಾಗಿದೆ ಎಂದು ಹೇಳಿದ್ರು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅಧಿವೇಶನದಲ್ಲಿ ಪ್ರಸ್ತಾಪಿಸಿದರು.ಬಳಿಕ ಧ್ವನಿ ಮತದ ಮೂಲಕ ಮತಾಂತರ ನಿಷೇಧ ವಿಧೇಯಕ ಅಂಗೀಕಾರ ಮಾಡಲಾಯಿತು.

- Advertisement -
spot_img

Latest News

error: Content is protected !!