Wednesday, July 9, 2025
Homeಕರಾವಳಿಅ.19 ರಿಂದ ಉಪಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ

ಅ.19 ರಿಂದ ಉಪಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ

spot_img
- Advertisement -
- Advertisement -

ಮಂಗಳೂರು: ಅ.21ರಂದು ವಿಧಾನ ಪರಿಷತ್‌ಗೆ ನಡೆಯುವ ಉಪಚುನಾವಣೆಯ ಮತದಾನದ ಹಿನ್ನೆಲೆಯಲ್ಲಿ ಅ.19ರ ಸಂಜೆ 4 ರಿಂದ ಅ.21 ರಂದು ಮತದಾನ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ಜಿಲ್ಲೆಯ ಒಟ್ಟು 234 ಮತದಾನ ಕೇಂದ್ರಗಳ ಸುತ್ತಮುತ್ತ 100 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಎಂ.ಪಿ ಆದೇಶಿಸಿದ್ದಾರೆ.

ಜಿಲ್ಲಾಧಿಕಾರಿ ನಿಯಮಗಳು: 5 ಕ್ಕಿಂತ ಹೆಚ್ಚು ಜನರು ಮತಗಟ್ಟೆ ವ್ಯಾಪ್ತಿಯಲ್ಲಿ ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ. ಚುನಾವಣಾ ಅಭ್ಯರ್ಥಿ/ಬೆಂಬಲಿಗರು ಸೇರಿ 5 ಜನರಿಗಿಂತ ಹೆಚ್ಚಿನ ಸಂಖ್ಯೆಯ ಜನರು ಸೇರುವಂತಿಲ್ಲ. ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ನಿಬಂಧಿಸಲಾಗಿದೆ. ಈ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್‌ ಅಂಗಡಿ, ಬುಕ್‌ಸ್ಟಾಲ್‌, ಸೈಬರ್‌ ಕೆಫೆಗಳನ್ನು ನಿರ್ಬಂಧಿಸಿದೆ. ಕಲ್ಲುಗಳನ್ನು ಮತ್ತು ಎಸೆಯುವಂತಹ ವಸ್ತುಗಳನ್ನು ಎಸೆಯುವ ಅಥವಾ ಬಿಡುವ ಸಾಧನಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ.

- Advertisement -
spot_img

Latest News

error: Content is protected !!