Monday, June 8, 2026
Homeಕರಾವಳಿಸುರತ್ಕಲ್ ನಲ್ಲಿ ಫಾಜಿಲ್ ಹತ್ಯೆ ಪ್ರಕರಣ; ನಾಲ್ಕು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ, ಮದ್ಯದಂಗಡಿ ಬಂದ್

ಸುರತ್ಕಲ್ ನಲ್ಲಿ ಫಾಜಿಲ್ ಹತ್ಯೆ ಪ್ರಕರಣ; ನಾಲ್ಕು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ, ಮದ್ಯದಂಗಡಿ ಬಂದ್

- Advertisement -
- Advertisement -

ಮಂಗಳೂರು: ಸುರತ್ಕಲ್ ನಲ್ಲಿ ನಿನ್ನೆ ರಾತ್ರಿ ಫಾಜಿಲ್ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಸುರತ್ಕಲ್, ಪಣಂಬೂರು, ಮುಲ್ಕಿ, ಬಜ್ಪೆ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಆದೇಶ ಹೊರಡಿಸಿದ್ದು ಶನಿವಾರ ಮುಂಜಾನೆವರೆಗೂ ನಿಷೇಧಾಜ್ಞೆ ವಿಧಿಸಲಾಗಿದೆ. ಮದ್ಯದಂಗಡಿ ಸಂಪೂರ್ಣ ಬಂದ್ ಆಗಿರಲಿದೆ.

ಇನ್ನು ಇಂದು ಶುಕ್ರವಾರವಾಗೊರುವ ಹಿನ್ನಲೆಯಲ್ಲಿ ನಿಷೇಧಾಜ್ಞೆ ಇರುವೆಡೆ ಮಸೀದಿಗಳಲ್ಲಿ ಪ್ರಾರ್ಥನೆಗೆ ಅವಕಾಶವಿಲ್ಲ.
ನಿಷೇಧಾಜ್ಞೆ ಇಲ್ಲದ ತಮ್ಮ ಸಮೀಪದ ಮಸೀದಿಗಳಿಗೆ ಹೋಗಿ ಪ್ರಾರ್ಥನೆ ಸಲ್ಲಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ‌. ಅಲ್ಲದೇ
ಗುಂಪು ಗುಂಪಾಗಿ ತೆರಳದೇ ಒಬ್ಬೊಬ್ಬರಾಗಿ ಹೋಗಲು ಮಾತ್ರ ಅವಕಾಶ ಕಲ್ಪಿಸಲಾಗಿದೆ.

- Advertisement -

Latest News

error: Content is protected !!