Saturday, December 3, 2022
Homeಕರಾವಳಿಉಡುಪಿಶಿರ್ವ: ಸಂತ ಮೇರಿ ಮಹಾವಿದ್ಯಾಲಯದಲ್ಲಿ ಪ್ರಾಜೆಕ್ಟ್ ಅಭಿವೃದ್ಧಿ ಕಾರ್ಯಗಾರ

ಶಿರ್ವ: ಸಂತ ಮೇರಿ ಮಹಾವಿದ್ಯಾಲಯದಲ್ಲಿ ಪ್ರಾಜೆಕ್ಟ್ ಅಭಿವೃದ್ಧಿ ಕಾರ್ಯಗಾರ

- Advertisement -
- Advertisement -

ಶಿರ್ವ: ಇಂದಿನ ತಂತ್ರಜ್ಞಾನ ಯುಗದಲ್ಲಿ ಕಂಪ್ಯೂಟರ್ ಪದವೀಧರ ವಿದ್ಯಾರ್ಥಿಗಳು ಬದಲಾಗುತ್ತಿರುವ ತಂತ್ರಜ್ಞಾನ ಕಲಿಕೆಯು ಕಾಲೇಜು ಹಂತದಲ್ಲಿ ಕಲಿಯುವ ಮೂಲಕ ಮುಂದೆ ಸಮಾಜಕ್ಕೆ ಬೇಕಾಗುವ ನುರಿತ ತಂತ್ರಾಂಶವನ್ನು ರೂಪಿಸಲು ಮತ್ತು ಸಂಶೋಧನಾ ಮನಸ್ಥಿತಿಯನ್ನು ಬೆಳೆಸಲು ಇಂತಹ ಕಾರ್ಯಗಾರ ಸಹಕಾರಿ ಎಂದು ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದ ಗಣಕ ವಿಜ್ಞಾನ ವಿಭಾಗದ ವತಿಯಿಂದ ಬಿಸಿಎ ವಿದ್ಯಾರ್ಥಿಗಳಿಗೆ ಫೆಬ್ರವರಿ 28ರಂದು ರಾಷ್ಟ್ರೀಯ ವಿಜ್ಞಾನ ದಿನದ ಪ್ರಯುಕ್ತ ಏರ್ಪಡಿಸಿದ ಸಾಫ್ಟ್ವೇರ್ ಪ್ರಾಜೆಕ್ಟ್ ಅಭಿವೃದ್ಧಿ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ವಿಪ್ರೋ ಕಂಪನಿಯ ಜೂನಿಯರ್ ಅಸೋಸಿಯೇಟ್ ಶ್ರೀ ರಿಯಾನ್ ರಿಷಿ ಅಲ್ಫೋನ್ಸೋ ಮಾತನಾಡಿದರು.

ತಾಂತ್ರಿಕ ಪರಿಣತಿಯೊಂದಿಗೆ ಸಮಗ್ರ ವ್ಯಕ್ತಿತ್ವದ ಬೆಳವಣಿಗೆಯೂ ಅಗತ್ಯ. ಈ ಅವಶ್ಯಕತೆಗಳನ್ನು ಪೂರೈಸಲು, ಉದ್ಯಮದ ಮಾನದಂಡಗಳಿಗೆ ಸಮಾನವಾಗಿ ಕಂಪ್ಯೂಟರ್ ಪದವೀಧರರ ಸಾಮರ್ಥ್ಯವನ್ನು ಹೆಚ್ಚಿಸಲು ಕಾಲೇಜು ಹಂತದಲ್ಲೇ ಇಂತಹ ಸಂಪೂರ್ಣ ತರಬೇತಿ ಪಡೆದುಕೊಂಡು ತಮ್ಮ ಕೌಶಲ್ಯವನ್ನು ವೃದ್ಧಿಸಿಕೊಳ್ಳುವ ಜೊತೆಗೆ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು, ಮುಂದೆ ವಿವಿಧ ವಿಜ್ಞಾನಿಗಳ ಆಗಬೇಕು ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ| ಹೆರಾಲ್ಡ್ ಐವನ್ ಮೋನಿಸ್ ರವರು ನುಡಿದರು.

ಪ್ರತಿ ಸ್ಟಾರ್ಟ್‌ಅಪ್‌ಗೆ ಉತ್ತಮ ಐಡಿಯಾ ಬೇಕು. ಅನನ್ಯ ಮತ್ತು ಬಲವಾದ ಪೂರೈಸಬಹುದಾದ ಗ್ರಾಹಕರ ಅಗತ್ಯವನ್ನು ಕಂಡುಕೊಂಡಾಗ ಆರಂಭಿಕ ವ್ಯವಹಾರಗಳು ಯಶಸ್ವಿಯಾಗುತ್ತವೆ. ಯಾವುದೇ ಸಂದರ್ಭದಲ್ಲಿ, ಉತ್ತಮ ಆಲೋಚನೆ, ಸರಿಯಾದ ಮಾನದಂಡಗಳಿಗೆ ಮತ್ತು ಕಠಿಣ ಪರಿಶ್ರಮವು ಯಶಸ್ಸಿಗೆ ನಿರ್ಣಾಯಕವಾಗಿದೆ. ಈ ಪ್ರಮುಖ ಅಂಶವನ್ನು ಪರಿಗಣನೆಗೆ ಇಟ್ಟುಕೊಂಡು, ಪದವಿ ವಿದ್ಯಾರ್ಥಿಗಳು ತಮ್ಮ ಉದ್ಯೋಗಕ್ಕೆ ಬೇಕಾಗುವ ಕೌಶಲ್ಯಗಳನ್ನು ಹೆಚ್ಚಿಸಲು ಮತ್ತು ವಿವಿಧ ಕೈಗಾರಿಕೆಗಳಲ್ಲಿ ಉತ್ತಮ ಉದ್ಯೋಗವನ್ನು ಸಾಧಿಸಲು ಇಂತಹ ಕಾರ್ಯಗಾರ ಇಂದು ಅನಿವಾರ್ಯವಾಗಿದೆ ಎಂದು ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಲೆಫ್ಟಿನೆಂಟ್ ಕೆ. ಪ್ರವೀಣ್ ಕುಮಾರ್ ಅವರು ತಮ್ಮ ಅನಿಸಿಕೆ ವ್ಯಕ್ತಪಡಿಸಿ ಕಾರ್ಯಕ್ರಮದ ಮುಖ್ಯ ಉದ್ದೇಶವನ್ನು ತಿಳಿಸಿ ಪ್ರಾಸ್ತವಿಕವಾಗಿ ಮಾತನಾಡಿದರು

ಈ ಕಾರ್ಯಕ್ರಮದಲ್ಲಿ ವಿಪ್ರೋ ಕಂಪನಿಯ ಜ್ಯೂನಿಯರ್ ಅಸೋಸಿಯೇಟ್ ಪೂಜಾರಿ ಪ್ರತೀಕ್ ಪ್ರಭಾಕರ್,ಉಪನ್ಯಾಸಕ ಪ್ರಕಾಶ್, ಬಿಸಿಎ ವಿಭಾಗದ ವಿದ್ಯಾರ್ಥಿಗಳು, ಅಧ್ಯಾಪಕ ವೃಂದ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಅನುಪ್ ನಾಯಕ್, ದೀಕ್ಷಿತ್ ಹಾಗೂ ಸಾತ್ವಿಕ್ ಜೆ ಕೋಟ್ಯಾನ್ ಸಹಕರಿಸಿದರು.ಕು. ಹರ್ಷಿತ ಮತ್ತು ಬಳಗ ಪ್ರಾರ್ಥಿಸಿ, ಕು.ಶ್ರಾವ್ಯ ವಂದಿಸಿದರು. ಕು.ಛಾಯಾ ಏ ಕರ್ಕೇರ ಸ್ವಾಗತಿಸಿ, ಕು. ಚಂದನ ಕಾರ್ಯಕ್ರಮ ನಿರೂಪಿಸಿದರು.

- Advertisement -
spot_img

Latest News

error: Content is protected !!