Monday, May 20, 2024
Homeತಾಜಾ ಸುದ್ದಿ'ಕಾನೂನಿನಡಿಯಲ್ಲಿ ವೇಶ್ಯಾವಾಟಿಕೆ ಕ್ರಿಮಿನಲ್ ಅಪರಾಧವಲ್ಲ': ಬಾಂಬೆ ಹೈಕೋರ್ಟ್

‘ಕಾನೂನಿನಡಿಯಲ್ಲಿ ವೇಶ್ಯಾವಾಟಿಕೆ ಕ್ರಿಮಿನಲ್ ಅಪರಾಧವಲ್ಲ’: ಬಾಂಬೆ ಹೈಕೋರ್ಟ್

spot_img
- Advertisement -
- Advertisement -

ಮುಂಬೈ: ‘ವಯಸ್ಕ ಮಹಿಳೆಗೆ ತನ್ನ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳುವ ಹಕ್ಕಿದೆ, ಕಾನೂನಿನಡಿಯಲ್ಲಿ ವೇಶ್ಯಾವಾಟಿಕೆ ಕ್ರಿಮಿನಲ್ ಅಪರಾಧವಲ್ಲ’ ಎಂದು ಅಭಿಪ್ರಾಯಪಟ್ಟಿರುವ ಬಾಂಬೆ ಹೈಕೋರ್ಟ್, ಮುಂಬೈನಲ್ಲಿ ಬಂಧನಕ್ಕೊಳಗಾಗಿರುವ ಮೂವರು ಮಹಿಳಾ ಲೈಂಗಿಕ ಕಾರ್ಯಕರ್ತರನ್ನು ತಕ್ಷಣ ಬಿಡುಗಡೆ ಮಾಡುವಂತೆ ಆದೇಶ ಹೊರಡಿಸಿದೆ.

‘1956ರ ಅನೈತಿಕ ಚಟುವಟಿಕೆ (ತಡೆಗಟ್ಟುವಿಕೆ) ಕಾಯ್ದೆಯ ಅಡಿಯಲ್ಲಿ ವೇಶ್ಯಾವಾಟಿಕೆಯನ್ನು ಕ್ರಿಮಿನಲ್ ಅಪರಾಧವೆಂದು ಪರಿಗಣಿಸಲಾಗಿಲ್ಲ,’ ಎಂದೂ ನ್ಯಾಯಮೂರ್ತಿ ಪೃಥ್ವಿರಾಜ್ ಚೌಹಾಣ್‌ ಅವರ ನೇತೃತ್ವದ ನ್ಯಾಯಪೀಠವು ಆದೇಶದ ವೇಳೆ ತಿಳಿಸಿದೆ.

‘ಮೂವರು ಮಹಿಳೆಯರು ವಯಸ್ಕರಾಗಿದ್ದಾರೆ. ಅವರು ಇಚ್ಚಿಸಿದಂತೆ ಬದುಕಲು, ಅವರು ಇಷ್ಟಪಟ್ಟ ವೃತ್ತಿ ಆಯ್ಕೆ ಮಾಡಿಕೊಳ್ಳಲು ಸ್ವತಂತ್ರರಿದ್ದಾರೆ. ಸ್ವತಃ ವೇಶ್ಯಾವಾಟಿಕೆ ಅಪರಾಧವಲ್ಲ. ಮತ್ತು ಶಿಕ್ಷೆಗೂ ಒಳಗಾಗುವುದಿಲ್ಲ. ಆದರೆ, ಅದರ ಸಾರ್ವಜನಿಕ ಒತ್ತಾಯವು ಕಾಯಿದೆಯಡಿ ಅಪರಾಧವೆನಿಸಿಕೊಂಡಿದೆ,’ ಎಂದು ನ್ಯಾಯಮೂರ್ತಿ ತಿಳಿಸಿದ್ದಾರೆ.

‘ವಾಣಿಜ್ಯ ಉದ್ದೇಶಕ್ಕಾಗಿ ವ್ಯಕ್ತಿಯನ್ನು ಲೈಂಗಿಕ ಶೋಷಣೆಗೆ ತಳ್ಳುವುದು, ನಿಂದಿಸುವುದು ಮತ್ತು ಅದನ್ನೇ ಜೀವನೋಪಾಯವನ್ನಾಗಿ ಮಾಡಿಕೊಳ್ಳುವುದು 1956ರ ಅನೈತಿಕ ಚಟುವಟಿಕೆ (ತಡೆಗಟ್ಟುವಿಕೆ) ಕಾಯ್ದೆಯ ಅಡಿಯಲ್ಲಿ ಅಪರಾಧವೆನಿಸಿಕೊಂಡಿದೆ. ಒಬ್ಬ ವ್ಯಕ್ತಿಯು ಸಾರ್ವಜನಿಕ ಸ್ಥಳದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದರೆ, ಅಥವಾ ಇನ್ನೊಬ್ಬ ವ್ಯಕ್ತಿಯನ್ನು ಒತ್ತಾಯಪಡಿಸುತ್ತಿದ್ದರೆ, ಪ್ರಲೋಭನೆಗೆ ಒಳಪಡಿಸುತ್ತಿದ್ದರೆ ಅದೂ ಕೂಡ ಅಪರಾಧವೆನಿಸಿಕೊಳ್ಳುತ್ತದೆ,’ ಎಂದು ಕೋರ್ಟ್‌ ಸ್ಪಷ್ಟವಾಗಿ ಹೇಳಿದೆ.

- Advertisement -
spot_img

Latest News

error: Content is protected !!