Monday, June 8, 2026
Homeಕರಾವಳಿಉಡುಪಿಉಡುಪಿ: ಇಂದ್ರಾಳಿಯ ರೈಲು ನಿಲ್ದಾಣದಲ್ಲಿ ಮನೆ ಬಿಟ್ಟು ಬಂದಿದ್ದ ಮೂವರು ಬಾಲಕರ ರಕ್ಷಣೆ

ಉಡುಪಿ: ಇಂದ್ರಾಳಿಯ ರೈಲು ನಿಲ್ದಾಣದಲ್ಲಿ ಮನೆ ಬಿಟ್ಟು ಬಂದಿದ್ದ ಮೂವರು ಬಾಲಕರ ರಕ್ಷಣೆ

- Advertisement -
- Advertisement -

ಉಡುಪಿ: ಮನೆ ಬಿಟ್ಟುಬಂದಿದ್ದ ಮೂವರು ಬಾಲಕರನ್ನು ಇಂದ್ರಾಳಿಯ ರೈಲು ನಿಲ್ದಾಣದಲ್ಲಿ ರೈಲ್ವೆ ಪೋಲಿಸರು, ಮಕ್ಕಳ ರಕ್ಷಣಾ ಘಟಕ ಹಾಗೂ ಉಡುಪಿ ಜಿಲ್ಲಾ ನಾಗರಿಕ ಸಮಿತಿ ರಕ್ಷಿಸಿರುವ ಘಟನೆ ನಡೆದಿದೆ. ಅಪ್ರಾಪ್ತರು ಉತ್ತರ ಕನ್ನಡ ಜಿಲ್ಲೆಯವರೆಂದು ತಿಳಿದುಬಂದಿದೆ. ಮೂವರನ್ನು ಸದ್ಯ ಶಂಕರಪುರದ ವಿಶ್ವಾಸದಮನೆ ಪುರ್ನವಸತಿ ಕೇಂದ್ರದಲ್ಲಿ ದಾಖಲುಪಡಿಸಲಾಗಿದೆ.

ಕಾರ್ಯಾಚರಣೆಯಲ್ಲಿ ಆರ್‌ಪಿಎಫ್ ಇನ್ಸ್ಪೆಕ್ಟರ್ ಪಿ.ವಿ ಮಧುಸೂದನ್, ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳಾದ ಸಂದೇಶ್ ಕೆ.ಸುರಕ್ಷಾ, ಚೈಲ್ಡ್ ಲೈನ್ ಸಿಬ್ಬಂದಿ ಪ್ರಮೋದ್, ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಭಾಗಿಯಾಗಿದ್ರು.

- Advertisement -

Latest News

error: Content is protected !!