Saturday, June 6, 2026
Homeಕರಾವಳಿಸುಳ್ಯದ ಕಾಂಗ್ರೆಸ್ ಅಭ್ಯರ್ಥಿ ಜಿ ಕೃಷ್ಣಪ್ಪ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಅಸಮಾಧಾನ; ಜಿಲ್ಲಾ ಕಾಂಗ್ರೆಸ್...

ಸುಳ್ಯದ ಕಾಂಗ್ರೆಸ್ ಅಭ್ಯರ್ಥಿ ಜಿ ಕೃಷ್ಣಪ್ಪ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಅಸಮಾಧಾನ; ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆ

- Advertisement -
- Advertisement -

ಸುಳ್ಯ: ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ ಆದ ಬೆನ್ನಲ್ಲೇ ಸುಳ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಅಸಮಾಧಾನ ಭುಗಿಲೆದ್ದಿದೆ. ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಜಿಗಣಿ ಕೃಷ್ಣಪ್ಪ ಅವರನ್ನು ಬದಲಿಸಬೇಕೆಂಬ ಕೂಗು ಜೋರಾಗಿದೆ.

ಇದರ ಬೆನ್ನಲ್ಲೇ ಜಿಗಣಿ ಕೃಷ್ಣಪ್ಪ ಅವರನ್ನು ಬದಲಿಸಬೇಕು ಎಂದು ಒತ್ತಾಯಿಸಿ ಸುಳ್ಯ ಭಾಗದ ಕಾಂಗ್ರೆಸ್ ಕಾರ್ಯಕರ್ತರು 15 ಬಸ್ ಗಳಲ್ಲಿ ಮಂಗಳೂರಿಗೆ ತೆರಳಿ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆ ನಡೆಸಿದ್ರು

 ‘ನಾಯಕರ ಅಭ್ಯರ್ಥಿ ನಮಗೆ ಬೇಡ, ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡಬೇಕು’. ‘ನಂದಕುಮಾರ್ ಅವರಿಗೆ ಬಿ ಫಾರ್ಮ್ ಕೊಡಿ, ಸುಳ್ಯದಲ್ಲಿ ಕಾಂಗ್ರೆಸ್ ಗೆಲ್ಲಿಸಿಕೊಡುತ್ತೇವೆ’ ಎಂದು ಕಾಂಗ್ರೆಸ್ ಕಾರ್ಯಕರ್ತರು ಫಲಕಗಳನ್ನು ಹಿಡಿದು ಕಾಂಗ್ರೆಸ್ ಕಚೇರಿ ‌ಎದುರು ಪ್ರತಿಭಟನೆ ನಡೆಸಿದ್ದಾರೆ. ಈ ಕುರಿತು ಪಕ್ಷದ ವರಿಷ್ಠರು ನ್ಯಾಯ ನೀಡಬೇಕು ಎಂದು ಆಗ್ರಹಿಸಿದ್ದಾರೆ.

- Advertisement -

Latest News

error: Content is protected !!