Thursday, June 4, 2026
Homeಕರಾವಳಿಉಡುಪಿಉಡುಪಿ: ಪೆಟ್ರೋಲ್ ಬೆಲೆ ಏರಿಕೆ ವಿರೋಧಿಸಿ ಸ್ಕೂಟರ್ ಹೊತ್ತು ಅಣಕು ಶವಯಾತ್ರೆ

ಉಡುಪಿ: ಪೆಟ್ರೋಲ್ ಬೆಲೆ ಏರಿಕೆ ವಿರೋಧಿಸಿ ಸ್ಕೂಟರ್ ಹೊತ್ತು ಅಣಕು ಶವಯಾತ್ರೆ

- Advertisement -
- Advertisement -

ಉಡುಪಿ: ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ಮಾಡಿದ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಅಲೆವೂರು ರಾಮಪುರ ರಿಕ್ಷಾ ತಂಗುದಾಣದ ಬಳಿ ಬೃಹತ್ ಪ್ರತಿಭಟನೆ ನಡೆಯಿತು.

ಕಾಪು ಬಿಜೆಪಿ ವತಿಯಿಂದ ಪ್ರತಿಭಟನೆಯಲ್ಲಿ ಚಟ್ಟದ ಮೇಲೆ ಸ್ಕೂಟರ್ ಇರಿಸಿ ಹೊತ್ತು ಮೆರವಣಿಗೆ ಮಾಡಿದ ಬಿಜೆಪಿ ನಾಯಕರು ಅಣಕು ಶವಯಾತ್ರೆ ನಡೆಸಿದರು‌.

ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ‌ ಘೋಷಣೆ ‌ಕೂಗಿದ ಬಿಜೆಪಿ ಕಾರ್ಯಕರ್ತರು, ಕೂಡಲೇ ಬೆಲೆ‌ ಏರಿಕೆಯ ನಿರ್ಧಾರವನ್ನು ಹಿಂಪಡೆಯಬೇಕೆಂದು ಆಗ್ರಹಿಸಿದರು.

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಬಿಜೆಪಿ ರಾಜ್ಯ ಮಹಿಳಾ ಮೋರ್ಛಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ ಮತ್ತು ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಅಲ್ಲದೇ, ಕಾಪು ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ಮಟ್ಟು, ಶರಣ್ ಮಟ್ಟು, ಯುವ ಮೋರ್ಛಾ ಅಧ್ಯಕ್ಷ ಸೋನು ಪಾಂಗಾಳ, ಹಿಂದುಳಿದ ವರ್ಗದ ಅಧ್ಯಕ್ಷ ಸಂತೋಷ್ ಮೂಡುಬೆಳ್ಳೆ, ಜಿಲ್ಲಾ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೂರು, ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ್ ನಾಯಕ್ ಪ್ರತಿಭಟನೆಯಲ್ಲಿ  ಪಾಲ್ಗೊಂಡಿದ್ದರು.

- Advertisement -

Latest News

error: Content is protected !!