Sunday, June 7, 2026
Homeಕರಾವಳಿಮಂಗಳೂರು ವಿವಿಯಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರತಿಭಟನೆ

ಮಂಗಳೂರು ವಿವಿಯಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರತಿಭಟನೆ

- Advertisement -
- Advertisement -

ಮಂಗಳೂರು: ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಪ್ರತಿಭಟನೆ ನಡೆದಿದೆ. ಮಂಗಳೂರು ವಿವಿಯ ಸ್ನಾತಕೋತ್ತರ ವಿದ್ಯಾರ್ಥಿ ಪರಿಷತ್ ಉದ್ಘಾಟನೆಗೆ ಮುಖ್ಯ ಅತಿಥಿಯಾಗಿ ಆಗಮಿಸಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆದಿದೆ.

ಕಲ್ಲಡ್ಕ ಪ್ರಭಾಕರ ಭಟ್ ಗೋ ಬ್ಯಾಕ್ ಅಂತಾ ಸಿಎಫ್ಐ ವಿದ್ಯಾರ್ಥಿ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಗಿದ್ದು, ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಮುತ್ತಿಗೆ ಹಾಕಲು ಯತ್ನ ನಡೆದಿದೆ. ಪೊಲೀಸರನ್ನು ತಳ್ಳಿಕೊಂಡು ಹೋಗಲು ವಿದ್ಯಾರ್ಥಿಗಳ ಯತ್ನ ನಡೆಸಿದ್ದು, ಇಬ್ಬರು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದು ಬಿಟ್ಟಿದ್ದಾರೆ.

ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿರುವ ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಮಂಗಳೂರು ವಿವಿ ಸ್ನಾತಕೋತ್ತರ ವಿದ್ಯಾರ್ಥಿ ಪರಿಷತ್ ಉದ್ಘಾಟನೆಗೆ ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿತ್ತು‌. ಇಂದು ಕಾರ್ಯಕ್ರಮಕ್ಕೆ ಪ್ರಭಾಕರ್ ಭಟ್ ಆಗಮಿಸಿದ ವೇಳೆ ಪ್ರತಿಭಟನೆ ನಡೆದಿದೆ.
ಮಂಗಳೂರು ವಿವಿ ಕುಲಪತಿ ಪ್ರೊ. ಸುಬ್ರಹ್ಮಣ್ಯ ಯಡಪಡಿತ್ತಾಯ ಕೂಡ ವಿದ್ಯಾರ್ಥಿ ಪರಿಷತ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

- Advertisement -

Latest News

error: Content is protected !!