Wednesday, July 15, 2026
Homeಕರಾವಳಿಮಂಗಳೂರುಮಂಗಳೂರು ಮಹಾ ನಗರ ಪಾಲಿಕೆ ಆಯುಕ್ತರನ್ನು ವಜಾ ಮಾಡುವಂತೆ ಸಿಪಿಐಎಂ ಪ್ರತಿಭಟನೆ

ಮಂಗಳೂರು ಮಹಾ ನಗರ ಪಾಲಿಕೆ ಆಯುಕ್ತರನ್ನು ವಜಾ ಮಾಡುವಂತೆ ಸಿಪಿಐಎಂ ಪ್ರತಿಭಟನೆ

- Advertisement -
- Advertisement -

ಮಂಗಳೂರು: ಕೆಲವು ದಿನಗಳ ಹಿಂದೆ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರ ಕಚೇರಿ ಮತ್ತು ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಇಂದು ಪ್ರತಿಭಟನೆ ನಡೆದಿದೆ.

ಪಾಲಿಕೆ ಆಯುಕ್ತರಾಗಿರುವ ಆನಂದ್ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿ ಸಿಪಿಐಎಂ ಕಾರ್ಯಕರ್ತರಿಂದ ಪ್ರತಿಭಟನೆ ನಡೆದಿದೆ.ಮಹಾನಗರ ಪಾಲಿಕೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಸಿಪಿಐಎಂ ಕಾರ್ಯಕರ್ತರು, ಬಳಿಕ ರಸ್ತೆ ತಡೆಗೆ ಮುಂದಾದರು. ಈ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.

ಜನರ ತೆರಿಗೆ ಹಣದಲ್ಲಿ ಆಯುಕ್ತರು ಅಕ್ರಮ ಆಸ್ತಿ ಸಂಪಾದಿಸಿರುವುದದಾಗಿ ಪ್ರತಿಭಟನಾಕಾರರು ಈ ವೇಳೆ ಆರೋಪಿಸಿದ್ದಾರೆ.

- Advertisement -

Latest News

error: Content is protected !!