ಬೆಂಗಳೂರು: ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ಅವ್ಯವಹಾರ ಆರೋಪದ ಸಂಬಂಧವಾಗಿ ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ವಿರುದ್ಧ ಬೆಂಗಳೂರಿನಲ್ಲಿ ಇಂದು ಕಾಂಗ್ರೆಸ್ ಪ್ರತಿಭಟನೆ ನಡೆಯಲಿದೆ.
ಬೆಳಗ್ಗೆ 10 ಗಂಟೆಗೆ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಯಲಿದ್ದು, ನಿನ್ನೆಯ ಕಾರ್ಕಳದ ಕಾಂಗ್ರೆಸ್ ಮುಖಂಡರು ಬೆಂಗಳೂರು ತಲುಪಿದ್ದಾರೆ.ವಿಧಾನಸಭೆ ಚುನಾವಣಾ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಮುನಿಯಾಲು ಉದಯ ಕುಮಾರ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜ ಸೇರಿದಂತೆ ಕಾಂಗ್ರೆಸ್ ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.
ವಾಲ್ಮೀಕಿ ನಿಗಮದ ಹಣಕಾಸು ಅವ್ಯವಹಾರ ಸಂಬಂಧ ವಿಧಾನಸಭೆಯಲ್ಲಿ ನಡೆದಿದ್ದ ಚರ್ಚೆಗೆ ಉತ್ತರ ಕೊಡುವ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಸಕ ಸುನೀಲ್ ಕುಮಾರ್ ವಿರುದ್ಧ ಹನ್ನೊಂದು ಕೋಟಿ ರೂಪಾಯಿಗಳ ಅವ್ಯವಹಾರದ ಆರೋಪ ಮಾಡಿದ್ದರು. ಸಿಎಂ ಆರೋಪಕ್ಕೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದ ಸುನೀಲ್ ಕುಮಾರ್, ಸಿಬಿಐ ತನಿಖೆಗೆ ಕೊಡಿ ಇಲ್ಲದಿದ್ದರೆ ನಮ್ಮ ತಿರುಗೇಟು ತಾಳುವುದಕ್ಕೂ ಸಿದ್ಧರಾಗಿ ಎಂದು ಹೇಳಿದ್ದರು.