Saturday, May 18, 2024
Homeಕರಾವಳಿಮಂಗಳೂರು: ಖಾಸಗಿ ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ಪ್ರತಿಭಟನೆ!

ಮಂಗಳೂರು: ಖಾಸಗಿ ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ಪ್ರತಿಭಟನೆ!

spot_img
- Advertisement -
- Advertisement -

ಮಂಗಳೂರು :ಜಾತ್ಯಾತೀತ ಪಕ್ಷಗಳ ಹಾಗೂ ಸಮಾನ ಮನಸ್ಕ ಸಂಫಟನೆಗಳ ಒಕ್ಕೂಟ ದ.ಕ.ಜಿಲ್ಲೆ ವತಿಯಿಂದ ನಗರದ ಕ್ಲಾಕ್ ಟವರ್ ಬಳಿ ಖಾಸಗಿ ಬಸ್ ಪ್ರಯಾಣ ದರವನ್ನು ಜಿಲ್ಲಾಡಳಿತ ಏಕಪಕ್ಷೀಯ ನಿರ್ಧಾರ ಮಾಡಿದೆ ಎಂದು ಆಕ್ಷೇಪಿಸಿ ಪ್ರತಿಭಟನೆ ನಡೆಸಿದರು.

ಸಾರಿಗೆ ಪ್ರಾಧಿಕಾರದ ಸಭೆ ಕರೆಯದೆ ಜಿಲ್ಲಾಧಿಕಾರಿ ಬಸ್ ದರವನ್ನು ಏರಿಕೆ ಮಾಡಿ ಏಕಪಕ್ಷೀಯ ನಿರ್ಧಾರ ಮಾಡಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ನೂರಾರು ಸಂಖ್ಯೆಯಲ್ಲಿ ಸೇರಿದ್ದ ವಿವಿಧ ಪಕ್ಷಗಳ ಹಾಗೂ ಸಂಘಟನೆಗಳ ಕಾರ್ಯಕರ್ತರು, ಬಸ್ ಮಾಲಕರ ದುರ್ವರ್ತನೆ ಹಾಗೂ ಜನವಿರೋಧಿಯಾಗಿ ವರ್ತಿಸುತ್ತಿರುವ ಜಿಲ್ಲಾಡಳಿತದ ಹಾಗೂ ಜನಪ್ರತಿನಿಧಿಗಳ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಆಕ್ರೋಶವನ್ನು ವ್ಯಕ್ತಪಡಿಸಿದರು.

ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದ ಸಿಪಿಎಂ ಮುಖಂಡ ವಸಂತ ಆಚಾರಿ,ಪೆಟ್ರೋಲಿಯಂ ಉತ್ಪನ್ನಗಳ ಹಾಗೂ ಜೀವನಾವಶ್ಯಕ ವಸ್ತುಗಳ ವಿಪರೀತ ಬೆಲೆಯೇರಿಕೆಯಿಂದಾಗಿ ಕಂಗೆಟ್ಟ ಜನಸಾಮಾನ್ಯರ ಬದುಕಿಗೆ ಬಸ್ ಪ್ರಯಾಣ ದರಯೇರಿಕೆಯು ಗಾಯದ ಮೇಲೆ ಬರೆ ಎಳೆದಂತಾಗಿದೆ.ಕೊರೋನಾ ಸಂಕಷ್ಟದ ಕಾಲಘಟ್ಟದಲ್ಲಿ ಉದ್ಯೋಗವಿಲ್ಲದೆ, ಆದಾಯವಿಲ್ಲದೆ ಪರಿತಪಿಸುತ್ತಿರುವ ದುಡಿಯುವ ಜನತೆಗೆ ಈ ಬಾರಿಯ ಪ್ರಯಾಣ ದರವನ್ನು ಅರಗಿಸಿಕೊಳ್ಳಲು ಸಾದ್ಯವೇ ಇಲ್ಲ.ಟಿಕೆಟ್ ದರ ಶೇ.50ರಷ್ಟು ಏರಿಕೆ ಮಾಡಲಾಗಿದೆ. ಜಿಲ್ಲಾಧಿಕಾರಿ ಜನ ಸಾಮಾನ್ಯರ ಪರ ವಹಿಸುವ ಬದಲು ಬಸ್ ಮಾಲಕರ ಪರ ವಹಿಸಿದ್ದಾರೆ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ವಿವಿಧ ಪಕ್ಷ, ಸಂಘಟನೆಗಳ ಮುಖಂಡರಾದ ಸದಾಶಿವ ಉಳ್ಳಾಲ್, ನೀರಜ್ ಪಾಲ್, ಮುಹಮ್ಮದ್ ಕುಂಜತ್ತಬೈಲ್, ಕೃಷ್ಣಪ್ಪ ಸಾಲ್ಯಾನ್, ವಿ.ಕುಕ್ಯಾನ್, ಸೀತಾರಾಂ ಬೇರಿಂಜ , ಸುಮತಿ ಹೆಗಡೆ, ಅಲ್ತಾಫ್ , ಎಂ. ದೇವದಾಸ್, ಬಾಬಿನ್ ಪ್ರೀತಮ್, ದುರ್ಗಾಪ್ರಸಾದ್ , ಜಯಂತಿ ಶೆಟ್ಟಿ, ಲತೀಫ್ ಬೆಂಗ್ರೆ, ಕರುಣಾಕರ್, ಪುಷ್ಪರಾಜ್ , ರಘು ಎಕ್ಕಾರು, ವಿಶುಕುಮಾರ್, ಸಂತೋಷ್ ಕುಮಾರ್ ಬಜಾಲ್, ಜೆರಾಲ್ಡ್ ಟವರ್, ಮೈಕಲ್ ಮೊದಲಾದವರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!