Sunday, June 7, 2026
Homeಕರಾವಳಿಮಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಗೆ ವಿರೋಧ; ಸಚಿವ ಡಾ.ಅಶ್ವಥ್ ನಾರಾಯಣ್ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ...

ಮಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಗೆ ವಿರೋಧ; ಸಚಿವ ಡಾ.ಅಶ್ವಥ್ ನಾರಾಯಣ್ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಸಿಎಫ್ಐ ಕಾರ್ಯಕರ್ತರು!

- Advertisement -
- Advertisement -

ಮಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಸಿಎಫ್ಐ ಕಾರ್ಯಕರ್ತರು ಮಂಗಳೂರು ಕೊಣಾಜೆ ವಿಶ್ವ ವಿದ್ಯಾನಿಲಯದಲ್ಲಿ ಪ್ರತಿಭಟನೆ ನಡೆಸುತ್ತಿದ್ದು,ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ್ ಕಾರ್ಯಕ್ರಮಕ್ಕೆ ‌ಇಂದು ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ.

ರಾಷ್ಟ್ರೀಯ ಶಿಕ್ಷಣ ನೀತಿ ಉದ್ಘಾಟನಾ ಸಮಾರಂಭಕ್ಕೆ ಸಚಿವ ಡಾ.ಅಶ್ವಥ್ ನಾರಾಯಣ್ ಕೊಣಾಜೆ ವಿವಿಗೆ ಆಗಮಿಸಿದ್ದು, ಈ ವೇಳೆ ರಾಷ್ಟ್ರೀಯ ಶಿಕ್ಷಣ ನೀತಿ ಖಂಡಿಸಿ ಸಿಎಫ್‌ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ವಿವಿ ಕ್ಯಾಂಪಸ್ ಆವರಣದಲ್ಲಿ 50ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.

- Advertisement -

Latest News

error: Content is protected !!