Saturday, March 15, 2025
Homeಉದ್ಯಮಪಡುಬಿದ್ರಿ-ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ

ಪಡುಬಿದ್ರಿ-ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ

spot_img
- Advertisement -
- Advertisement -

ಪಡುಬಿದ್ರಿ: ಕಂಚಿನಡ್ಕದಲ್ಲಿ ಆ.24ರ ಶನಿವಾರದಂದು ಪಡುಬಿದ್ರಿ–ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಟೋಲ್ ಸಂಗ್ರಹಣಾ ಕೇಂದ್ರವನ್ನು ಶಾಶ್ವತವಾಗಿ ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಯಿತು.

ಹೋರಾಟ ಸಮಿತಿ ಅಧ್ಯಕ್ಷ ಸುಹಾಸ್ ಹೆಗ್ಡೆ ನಂದಳಿಕೆ ಮಾತನಾಡಿ, ‘ಕಾರ್ಕಳ – ಪಡುಬಿದ್ರಿ ನಡುವಿನ ಟೋಲ್ ಗೇಟ್ ಎಂಬ ಕಂಟಕವನ್ನು ಒದ್ದೋಡಿಸುವ ಹೋರಾಟಕ್ಕೆ ಪಕ್ಷಾತೀತವಾಗಿ ಎಲ್ಲರೂ ಕೈ ಜೋಡಿಸಿರುವುದು ಹೋರಾಟಕ್ಕೆ ಬಲ ಬಂದಿದೆ. ಈ ಹೋರಾಟವು ರಸ್ತೆಯಿಂದ ಸಂಪೂರ್ಣ ಎತ್ತಂಗಡಿಯಾಗುವವರೆಗೂ ಮುಂದುವರಿಯಲಿದೆ. ರಾಜ್ಯ ಸರಕಾರ ಕೂಡಲೇ ಸಂಪೂರ್ಣ ರದ್ಧು ಪಡಿಸಿ ಆದೇಶ ಹೊರಡಿಸಲಿ ಎಂದು ಆಗ್ರಹಿಸಿದರು.

ಉಡುಪಿ – ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಈ ಕುರಿತಂತೆ, ‘ಲೋಕೋಪಯೋಗಿ ಇಲಾಖೆ ಸಚಿವರು ಈಗಾಗಲೇ ತಾತ್ಕಾಲಿಕ ರದ್ಧು ಎಂಬ ಆದೇಶ ಹೊರಡಿಸಿದ್ದಾರೆ. ಆದರೆ ಈ ಅದೇಶ ಶಾಶ್ವತ ರದ್ದಾಗಬೇಕು. ರಾಜ್ಯಪತ್ರದಲ್ಲಿ ಇದನ್ನು ಆದೇಶ ಪತ್ರದಲ್ಲಿ ಪ್ರಕಟಿಸಬೇಕು. ಸಚಿವರನ್ನು ಭೇಟಿ ಮಾಡಿ ಈ ಬಗ್ಗೆ ಒತ್ತಾಯಿಸಲಾಗುವುದು ಎಂದರು.

ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀ ಈಶವಿಠಲದಾಸ ಸ್ವಾಮೀಜಿ , ‘ಜನರನ್ನು ಒಗ್ಗೂಡಿಸುವಲ್ಲಿ ಈ ಟೋಲ್ ಹೋರಾಟವು ಪ್ರಮುಖ ಪಾತ್ರವನ್ನು ನಿರ್ವಹಿಸಿದ್ದು, ಈ ಹೋರಾಟದಲ್ಲಿ ಎಲ್ಲಾ ಪಕ್ಷಗಳೂ, ಜಾತಿಯ ಜನರೂ ಒಗ್ಗೂಡಿದ್ದು ರಾಜಕೀಯ ರಹಿತ ಹೋರಾಟಕ್ಕೆ ಸರಕಾರವೂ ತಲೆಬಾಗುವುದು ನಿಶ್ಚಯವಾಗಿದೆ. ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯನ್ನು ಟೋಲ್ ಮುಕ್ತ ಜಿಲ್ಲೆಯನ್ನಾಗಿಸುವಲ್ಲಿ ನಾವೆಲ್ಲರೂ ಒಗ್ಗೂಡೋಣ ಎಂದರು.

ಈ ಸಂದರ್ಭದಲ್ಲಿ ಕೆ.ಎಂ.ಎಫ್ ಅಧ್ಯಕ್ಷ ಕೆ. ಸುಚರಿತ ಶೆಟ್ಟಿ, ಕುಯಿಲಾಡಿ ಸುರೇಶ್ ನಾಯಕ್, ಮುಖಂಡರಾದ ಸತೀಶ್ ಶೆಟ್ಟಿ ಮುಟ್ಲುಪಾಡಿ, ಮಧ್ವರಾಯ ಭಟ್ ನಂದಿಕೂರು, ಸಾಂತೂರು ಭಾಸ್ಕರ ಶೆಟ್ಟಿ, ರಾಮಕೃಷ್ಣ ಶರ್ಮ ಬಂಟಕಲ್ಲು, ರೇಷ್ಮಾ ಉದಯ ಶೆಟ್ಟಿ, ನವೀನ್ ಚಂದ್ರ ಶೆಟ್ಟಿ, ಅನ್ಸಾರ್ ಅಹಮದ್ ಉಡುಪಿ, ಉದಯ್ ಶೆಟ್ಟಿ ಇನ್ನ, ಶೀಲಾ ಕೆ. ಶೆಟ್ಟಿ ಎರ್ಮಾಳು, ದೀಪಕ್ ಕೋಟ್ಯಾನ್ ಇನ್ನ, ಕುತ್ಯಾರು ನವೀನ್ ಶೆಟ್ಟಿ, ವೆಂಕಟರಮಣ ಮುಚ್ಚಿಂತಾಯ, ದಿನೇಶ್ ಕೋಟ್ಯಾನ್ ಪಲಿಮಾರು, ಅಶೋಕ್ ಕುಮಾರ್ ಶೆಟ್ಟಿ, ಲಕ್ಷ್ಮಣ ಶೆಟ್ಟಿ, ಶಶಿಧರ ಶೆಟ್ಟಿ, ಮಟ್ಟಾರು ರತ್ನಾಕರ ಹೆಗ್ಡೆ, ಸದಾಶಿವ ಶೆಟ್ಟಿ, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ದಿನಕರ ಬಾಬು, ಶಶಿಕಾಂತ್ ಪಡುಬಿದ್ರಿ, ಲಕ್ಷ್ಮಣ ಶೆಟ್ಟಿ, ಶಶಿಕಲಾ ಮೊದಲಾದವರು ಉಪಸ್ಥಿತರಿದ್ದರು.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಅಪರ ಜಿಲ್ಲಾಧಿಕಾರಿ ಮಮತಾ ದೇವಿ, ಕಾಪು ತಹಶೀಲ್ದಾರ್ ಡಾ. ಪ್ರತಿಭಾ ಆರ್. ಅವರ ಮೂಲಕವಾಗಿ ಜಿಲ್ಲಾಡಳಿತ ಮತ್ತು ಸರಕಾರಕ್ಕೆ ಮನವಿ ಸಲ್ಲಿಸಲಾಯಿತು. ಮನವಿ ಸಲ್ಲಿಸುವಾಗ ಪ್ರಭಾರ ಡಿವೈಎಸ್ಪಿ ಗೀತಾ ಪಾಟೀಲ್, ಕಾಪು ವೃತ್ತ ನಿರೀಕ್ಷಕಿ ಜಯಶ್ರೀ ಮಾನೆ ಮೊದಲಾದವರು ಜತೆಗಿದ್ದರು.

- Advertisement -
spot_img

Latest News

error: Content is protected !!