Wednesday, June 26, 2024
Homeಕರಾವಳಿಉಡುಪಿಉಡುಪಿ-ಕಾಸರಗೋಡು 400 ಕೆವಿ ವಿದ್ಯುತ್ ಲೈನ್ ಯೋಜನೆಗೆ ವಿರೋಧ

ಉಡುಪಿ-ಕಾಸರಗೋಡು 400 ಕೆವಿ ವಿದ್ಯುತ್ ಲೈನ್ ಯೋಜನೆಗೆ ವಿರೋಧ

spot_img
- Advertisement -
- Advertisement -

ಉಡುಪಿ: ಕಾರ್ಕಳ ತಾಲೂಕಿನ ಇನ್ನಾದಲ್ಲಿ ಉದ್ದೇಶಿತ ಉಡುಪಿ – ಕಾಸರಗೋಡು 400 ಕೆವಿ ವಿದ್ಯುತ್ ಲೈನ್ ವಿರೋಧಿಸಿ ಬೃಹತ್ ಪ್ರತಿಭಟನೆ ನಡೆಯಿತು.

ಇನ್ನಾ ಮತ್ತು ಸುತ್ತಮುತ್ತಲಿನ ಗ್ರಾಮಗಳ ರೈತರ ಕೃಷಿ, ಭೂಮಿ, ತೋಟ ಮತ್ತು ಮನೆಗಳನ್ನು ನಾಶಪಡಿಸಿ ವಿದ್ಯುತ್ ಲೈನ್ ಅಳವಡಿಸಲು ಮುಂದಾಗಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಪ್ರತಿಭಟನೆಯಲ್ಲಿ ಪಾಲ್ಗೊಂಡು ರೈತರ ಅಹವಾಲು ಸ್ವೀಕರಿಸಿದ ವಿಧಾನ ಪರಿಷತ್ ಸದಸ್ಯ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಸೂಕ್ತವಾದ ಪರಿಹಾರ ಒದಗಿಸುವ ಭರವಸೆ ನೀಡಿದರು.

ಇದೇ ವೇಳೆ, ಬ್ರಹ್ಮಾವರದ ಡಿಪ್ಲೋಮಾ ಕೃಷಿ ಮಹಾವಿದ್ಯಾಲಯವನ್ನು ಉಳಿಸಲು ಸಂಘಟನೆಗಳಿಂದ ನಡೆದ ಪ್ರತಿಭಟನಾ ಧರಣಿಯಲ್ಲಿ ಕೂಡಾ ಪಾಲ್ಗೊಂಡ ಮಂಜುನಾಥ ಭಂಡಾರಿ, ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ವಿಧಾನ ಪರಿಷತ್ ಮಾಜಿ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿ ಕೂಡಾ ಪ್ರತಿಭಟನಾ‌ ಧರಣಿಯಲ್ಲಿ ಭಾಗವಹಿಸಿದ್ದರು.

- Advertisement -
spot_img

Latest News

error: Content is protected !!