- Advertisement -
- Advertisement -
ಉಡುಪಿ: ಎಸ್ಎಸ್ಎಲ್ ಸಿ ಟಿಸಿ ಕೊಟ್ಟಿಲ್ಲವೆಂದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಂದೂರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆದಿದೆ.
ವಿದ್ಯಾರ್ಥಿಗೆ ಬೈದಿರುವ ಆರೋಪ ಎದುರಿಸುತ್ತಿರುವ ಮುಖ್ಯ ಶಿಕ್ಷಕ ಸುರೇಶ್ ಭಟ್ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆದಿದೆ.
ಪಿಯುಸಿ ಸೇರಲು ಎಸ್ ಎಸ್ ಎಲ್ ಸಿ ಉತ್ತೀರ್ಣನಾಗಿದ್ದ ಬೈಂದೂರು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ನಿತಿನ್ ಆಚಾರಿ (16) ವರ್ಗಾವಣೆ ಪ್ರಮಾಣ ಪತ್ರ ಪಡೆಯಲು ಶಾಲೆಗೆ ಹೋಗಿದ್ದವನು ಮನೆಗೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದನು.
ಡೆತ್ ನೋಟ್ ನಲ್ಲಿ ಮುಖ್ಯ ಶಿಕ್ಷಕ ಸುರೇಶ್ ಭಟ್ ಬೈದಿರುವ ಬಗ್ಗೆ ಉಲ್ಲೇಖಿಸಿ ವಿದ್ಯಾರ್ಥಿ ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದನು.
ಬೈಂದೂರು ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದ್ದು, ಮೃತ ವಿದ್ಯಾರ್ಥಿಗೆ ಬೈದಿರುವ ಮುಖ್ಯ ಶಿಕ್ಷಕನನ್ನು ಬಂಧಿಸುವಂತೆ ಇಂದು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿ ಆಗ್ರಹಿಸಲಾಗಿದೆ.
- Advertisement -