ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಯುವ ಮೋರ್ಚಾದ ವತಿಯಿಂದ ಶಾಲೆಗಳ ಮೈದಾನದಲ್ಲಿ ಯಾವುದೇ ಶೈಕ್ಷಣಿಕೇತರ ಚಟುವಟಿಕೆ ನಡೆಸುವಂತಿಲ್ಲ ಎಂಬ ಆದೇಶದ ವಿರುದ್ಧ ಜು.22ರಂದು ಪ್ರತಿಭಟನೆ ನಡೆದಿದೆ.
ಸಾಂಕೇತಿಕವಾಗಿ ಭಜನೆ ನಡೆಸುವುದರ ಮೂಲಕ ಪ್ರತಿಭಟನಾಕಾರರು ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ,‘ಅನೇಕ ವರ್ಷಗಳಿಂದ ಶಾಲೆಗಳ ಮೈದಾನದಲ್ಲಿಯೇ ಸಾರ್ವಜನಿಕವಾಗಿ ಗಣೇಶೋತ್ಸವ, ಶಾರದೋತ್ಸವ ಹಾಗೂ ಮೊಸರು ಕುಡಿಕೆ ಸಹಿತ ಹಿಂದೂ ಹಬ್ಬಗಳ ಆಚರಣೆ ನಡೆಸಲಾಗುತ್ತಿದೆ. ಈ ರೀತಿಯ ಆದೇಶ ಹೊರಡಿಸಿರುವುದು ಖಂಡನೀಯ, ಸುತ್ತೋಲೆಯನ್ನು ವಾಪಸ್ ಪಡೆಯಬೇಕು ಎಂದು ತಹಶೀಲ್ದಾರ್ ಪ್ರಥ್ವಿ ಸಾನಿಕಂ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಯುವ ಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಮಹಿಳಾ ಮೋರ್ಚಾ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ, ರೈತಮೋರ್ಚ ಅಧ್ಯಕ್ಷ ವಿಜಯ್ ಗೌಡ, ಎಸ್.ಸಿ ಮೋರ್ಚಾ ಅಧ್ಯಕ್ಷ ಈಶ್ವರ ಬೈರ, ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಜಯಪ್ರಕಾಶ್ ಕಡಮಾಜೆ, ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ಸಹಿತ ಮಹಾಶಕ್ತಿ ಕೇಂದ್ರದ ಪದಾಧಿಕಾರಿಗಳು, ಪ್ರಮುಖರು, ಇನ್ನೂ ಅನೇಕರು ಭಾಗವಹಿಸಿದ್ದರು.


