Wednesday, June 3, 2026
Homeತಾಜಾ ಸುದ್ದಿಮಂಗಳೂರು: ಅಗ್ನಿಪಥ್‌ ಯೋಜನೆ ಹಿಂಪಡೆಯುವಂತೆ ಕಾಂಗ್ರೆಸ್‌ನಿಂದ ಪ್ರತಿಭಟನೆ

ಮಂಗಳೂರು: ಅಗ್ನಿಪಥ್‌ ಯೋಜನೆ ಹಿಂಪಡೆಯುವಂತೆ ಕಾಂಗ್ರೆಸ್‌ನಿಂದ ಪ್ರತಿಭಟನೆ

- Advertisement -
- Advertisement -

ಮಂಗಳೂರು: ‘ಅಗ್ನಿಪಥ’ ಯೋಜನೆಯನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕು’ ಎಂದು ಒತ್ತಾಯಿಸಿ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಇಂದು ಪ್ರತಿಭಟನೆ ನಡೆಯಿತು. ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ, ‘ಅಗ್ನಿಪಥ ಯೋಜನೆಯಡಿ ಸೇನೆ ಸೇರುವವರ ನೊಂದಣಿ ಕೇಂದ್ರಗಳನ್ನು ಬಿಜೆಪಿಯ ಯುವ ಮೋರ್ಚಾ ಆರಂಭಿಸುತ್ತಿದೆ. ಇದು ಸೇನೆಯಲ್ಲೂ ಭ್ರಷ್ಟಾಚಾರಕ್ಕೆ ದಾರಿ ಮಾಡಿಕೊಡಲಿದೆ’ ಎಂದು ಕಳವಳ ವ್ಯಕ್ತಪಡಿಸಿದರು.

‘ಈ ಯೋಜನೆ ಅಡಿ 17 ವರ್ಷದಿಂದ 23 ವರ್ಷದೊಳಗಿನರು ಮಾತ್ರ ಸೇನಾ ತರಬೇತಿ ಪಡೆಯಬಹುದು. ಯುವಜನರು ಪಿ.ಯು. ವಿದ್ಯಾಭ್ಯಾಸವನ್ನು ಮೊಟಕುಗೊಳಿಸಿ ಸೇನೆಗೆ ಸೇರಬೇಕಾಗುತ್ತದೆ. ನಾಲ್ಕು ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿದ ಬಳಿಕ ಮುಂದೆ ಅವರ ಪಾಡೇನು’ ಎಂದು ಅವರು ಪ್ರಶ್ನಿಸಿದರು.

‘ಬಿಜೆಪಿ ಯುವಜನರ ದಾರಿ ತಪ್ಪಿಸುತ್ತಿದೆ. ಅಧಿಕಾರಕ್ಕೆ ಬರುವ ಮುನ್ನ ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆಯನ್ನು ಬಿಜೆಪಿ ನೀಡಿತ್ತು. ಈಗ ವರ್ಷಕ್ಕೆ 2 ಸಾವಿರ ಉದ್ಯೋಗವನ್ನು ಸೃಷ್ಟಿಸುವುದಕ್ಕೂ ಸಾಧ್ಯವಾಗುತ್ತಿಲ್ಲ’ ಎಂದು ಟೀಕಿಸಿದರು. ಕಾಂಗ್ರೆಸ್ ಮುಖಂಡ ಜೆ.ಆರ್.ಲೋಬೊ, ‘ಅಗ್ನಿಪಥ ಯೋಜನೆಯಿಂದ ನಿರುದ್ಯೋಗ ನಿವಾರಣೆ ಆಗಲಿದೆ ಎಂಬುದು ಮಿಥ್ಯ, ಬಂಡವಾಳ ಹೂಡಿಕೆಯಿಂದ ಮಾತ್ರ ಹೆಚ್ಚಿನ ಉದ್ಯೋಗ ಸೃಷ್ಟಿಸಲು ಸಾಧ್ಯ’ ಎಂದರು. ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ವಿಶ್ವಾಸ್‌ದಾಸ್, ‘ಬಿಜೆಪಿ ಆಡಳಿತ ಆರಂಭವಾದ ಬಳಿಕ ಜನಸಮಾನ್ಯರು ನೆಮ್ಮದಿಯಿಂದ ಬದುಕುವ ವಾತಾವರಣವೇ ಇಲ್ಲ’ ಎಂದರು.

- Advertisement -

Latest News

error: Content is protected !!