ಕಾರ್ಕಳ: ರೋಹಿತ್ ಚಕ್ರವರ್ತಿ ಅಧ್ಯಕ್ಷತೆಯಲ್ಲಿ ಪಠ್ಯಪುಸ್ತಕ ಪರಿಷ್ಕರಣ ಸಮಿತಿಯ ಪಠ್ಯಪುಸ್ತಕದ ಕೇಸರಿಕರಣ ವಿರೋಧಿಸಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾರ್ಕಳ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಯಿತು. ಈ ವೇಳೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ರು.
ಈ ಸಂದರ್ಭದಲ್ಲಿ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರಪಾಲ್ ,70 ವರ್ಷಗಳಿಂದ ದೇಶವನ್ನು ಕಾಂಗ್ರೆಸ್ ಕಟ್ಟಿ ಬೆಳೆಸಿದೆ. ಆದರೆ ಇವತ್ತು ಸಮಾಜದಲ್ಲಿ ಅಶಾಂತಿಯ ವಾತಾವರಣವನ್ನು ಕಾಣುತ್ತಿದ್ದೇವೆ. ದಿನಗಳ ಹಿಂದೆ ಮೈಸೂರು ಮತ್ತು ಬೆಂಗಳೂರಿಗೆ ಬಂದ ಪ್ರಧಾನಿಯವರು ಕೀಳುಮಟ್ಟದ ಪ್ರಚಾರಕ್ಕಾಗಿ ಕಸ ಮತ್ತು ಬಾಟ್ಲಿ ಹೆಕ್ಕುತ್ತಾರೆ. ಇಂಥ ಪ್ರಧಾನಿಯವರಿಂದ ನಾವು ಏನನ್ನು ನಿರೀಕ್ಷಿಸಲು ಸಾಧ್ಯ ಎಂದು ವ್ಯಂಗ್ಯವಾಡಿದರು. ಈ ಸರಕಾರ ರೋಹಿತ ಚಕ್ರತೀರ್ಥ ಎಂಬ ಅಯೋಗ್ಯನನ್ನು ಪಠ್ಯಪುಸ್ತಕ ಸಮಿತಿಗೆ ಅಧ್ಯಕ್ಷನನ್ನಾಗಿ ಮಾಡಿ ಪವಿತ್ರವಾದ ಪಠ್ಯಪುಸ್ತಕವನ್ನು ಕೇಸರಿಕರಣ ಮಾಡಲು ಹೊರಟಿದೆ. ಮಕ್ಕಳ ಮನಸ್ಸಿನಲ್ಲಿ ವಿಷಬೀಜ ಬಿತ್ತುವ ಕೆಲಸ ಮಾಡುತ್ತಿದೆ ಎಂದು ಹೇಳಿದರು.


