Tuesday, May 21, 2024
Homeಕರಾವಳಿಪುತ್ತೂರು : ಸಂಬಳ ನೀಡದೆ ಸತಾಯಿಸುತ್ತಿರುವ ಅಧಿಕಾರಿಗಳ ವಿರುದ್ಧ ಕೆ.ಎಸ್.ಆರ್.ಟಿ.ಸಿ ನೌಕರರು ಪ್ರತಿಭಟನೆ!

ಪುತ್ತೂರು : ಸಂಬಳ ನೀಡದೆ ಸತಾಯಿಸುತ್ತಿರುವ ಅಧಿಕಾರಿಗಳ ವಿರುದ್ಧ ಕೆ.ಎಸ್.ಆರ್.ಟಿ.ಸಿ ನೌಕರರು ಪ್ರತಿಭಟನೆ!

spot_img
- Advertisement -
- Advertisement -

ಪುತ್ತೂರು : ಸಂಬಳ ನೀಡದೆ ಸತಾಯಿಸುತ್ತಿರುವ ಕೇಂದ್ರ ಕಛೇರಿಯ ಅಧಿಕಾರಿಗಳ ವಿರುದ್ಧ ಕೆ.ಎಸ್.ಆರ್.ಟಿ.ಸಿ ನೌಕರರು ಪ್ರತಿಭಟನೆ ಆರಂಭಿಸಿದ್ದಾರೆ.

ಪುತ್ತೂರು ಕೆ.ಎಸ್.ಆರ್.ಟಿ.ಸಿ ಘಟಕದ ಸಿಬ್ಬಂದಿಗಳು ಬಿಎಂಎಸ್ ಸಂಘಟನೆಯ ನೇತೃತ್ವದಲ್ಲಿ ಈ ಧರಣಿ ಸತ್ಯಾಗ್ರಹವನ್ನುಆರಂಭಿಸಿದ್ದು, ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ ಈ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ.

ಅಕ್ಟೋಬರ್ ನಲ್ಲಿ ಅರ್ಧ ಸಂಬಳ ನೀಡಿ, ಬಳಿಕ ಸಂಬಳವನ್ನೇ ನೀಡದೆ ಕೇಂದ್ರ ಕಛೇರಿಯ ಅಧಿಕಾರಿಗಳು ನೌಕರರಿಗೆ ಸತಾಯಿಸುತ್ತಿದ್ದಾರೆ. ಈ ಬಗ್ಗೆ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಸೇರಿದಂತೆ ಕೆ.ಎಸ್.ಆರ್.ಟಿ.ಸಿ ಯ ಉನ್ನತ ಅಧಿಕಾರಿಗಳೂ ಮನವಿ ಮಾಡಲಾಗಿದೆ.ಉಸ್ತುವಾರಿ ಸಚಿವರು ಮನವಿಗೆ ಸ್ಪಂದಿಸಿ ತಕ್ಷಣವೇ ಸಂಬಳ ಬಿಡುಗಡೆಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರೂ, ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಹಿನ್ನಲೆಯಲ್ಲಿ ಇಂದಿನಿಂದ ಅಕ್ಟೋಬರ್ 25 ರ ತನಕ ಧರಣಿ ಸತ್ಯಾಗ್ರಹ ಮುಂದುವರಿಸಲಾಗುವುದು. ಸರಕಾರ ಈ ಬಗ್ಗೆ ಸೂಕ್ತ ನಿರ್ಧಾರಕ್ಕೆ ಬರದೇ ಹೋದಲ್ಲಿ 25 ರ ಬಳಿಕ ಅಮರಣಾಂತ ಉಪವಾಸ ಧರಣಿ ಆರಂಭಿಸಲಾಗುವುದು ಎಂದು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಿಎಂಎಸ್ ಘಟಕದ ಅಧ್ಯಕ್ಷ ಗಿರಿಶ್ ಮಳಿ ಹೇಳಿದ್ದಾರೆ.ಅಲ್ಲದೆ ಸಂಬಳ ನೀಡದೆ ದೌರ್ಜನ್ಯ ಎಸಗುವ ಅಧಿಕಾರಿಗಳ ವಿರುದ್ಧ ವೈಯಕ್ತಿಕ ಕೇಸು ದಾಖಲಿಸಲಾಗುವುದು ಎಂದರು.

- Advertisement -
spot_img

Latest News

error: Content is protected !!