Monday, May 6, 2024
Homeತಾಜಾ ಸುದ್ದಿಬೆಳ್ತಂಗಡಿ: ಕೊರಗ ಸಮುದಾಯದ ಮೇಲೆ ನಡೆದ ಪೋಲಿಸ್ ದೌರ್ಜನ್ಯವನ್ನು ಖಂಡಿಸಿ ಬೆಳ್ತಂಗಡಿ ಮಿನಿ ವಿಧಾನಸೌಧದ ಎದುರು...

ಬೆಳ್ತಂಗಡಿ: ಕೊರಗ ಸಮುದಾಯದ ಮೇಲೆ ನಡೆದ ಪೋಲಿಸ್ ದೌರ್ಜನ್ಯವನ್ನು ಖಂಡಿಸಿ ಬೆಳ್ತಂಗಡಿ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ

spot_img
- Advertisement -
- Advertisement -

ಬೆಳ್ತಂಗಡಿ: ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ , ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) , ದಲಿತ ಸಂಘರ್ಷ ಸಮಿತಿ (ಕೃಷ್ಣಪ್ಪ ಸ್ಥಾಪಿತ) , ದಲಿತ ಹಕ್ಕುಗಳ ಸಮಿತಿ ನೇತೃತ್ವದಲ್ಲಿ ಕೋಟ ಗ್ರಾಮದ ಕೋಟತಟ್ಟು ಕೊರಗ ಸಮುದಾಯದ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ ಬೆಳ್ತಂಗಡಿ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ದಲಿತ ಹಕ್ಕುಗಳ ಸಮಿತಿ ಅಧ್ಯಕ್ಷ ಶೇಖರ್ ಲಾಯಿಲ ಕೊರಗ ಸಮುದಾಯದ ಮೇಲಿನ ದೌರ್ಜನ್ಯದ ಹಿಂದೆ ರಾಜ್ಯ ಸರ್ಕಾರದ ಹಿಂದುತ್ವದ ಅಜೆಂಡಾ ಅಡಗಿದೆ. ಸಮಾಜ ಕಲ್ಯಾಣ ಸಚಿವರು ಕೊರಗ ಸಮುದಾಯವನ್ನು ಭೇಟಿ ಮಾಡಿದ ಬಳಿಕ ರಾಜ್ಯ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುವ ಪೋಲಿಸರು ಕ್ರಿಮಿನಲ್ ಕೇಸ್ ಹಾಕುವ ಮೂಲಕ ರಾಜ್ಯ ಸರ್ಕಾರದ ಸರ್ವಾಧಿಕಾರಿ ಧೋರಣೆ ಸಾಬೀತಾಗಿದೆ ಎಂದು ಆರೋಪಿಸಿದ ಅವರು ರಾಜ್ಯದಾದ್ಯಂತ ದಲಿತ, ಆದಿವಾಸಿ, ಮಹಿಳೆ, ಮಕ್ಕಳ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕೋಟ ಪ್ರಕರಣದ ನೈತಿಕ ಹೊಣೆ ಹೊತ್ತು ಗೃಹ ಸಚಿವ , ಸಮಾಜ ಕಲ್ಯಾಣ ಸಚಿವರು ರಾಜಿನಾಮೆ ನೀಡಲಿ ಎಂದರು.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ದಸಂಸ (ಅಂಬೇಡ್ಕರ್ ವಾದ) ಸಂಚಾಲಕ ನೇಮಿರಾಜ್ ಕಿಲ್ಲೂರು ” ರಾಜ್ಯದಲ್ಲಿ ದಲಿತ, ಆದಿವಾಸಿಗಳ ಮೇಲಿನ ದೌರ್ಜನ್ಯದ ಮುಂದುವರಿದ ಭಾಗವಾಗಿ ಕೋಟ ಕೊರಗ ಸಮುದಾಯದ ಮೇಲೆ ಪೊಲೀಸ್ ದೌರ್ಜನ್ಯ ನಡೆಸಲಾಗಿದೆ ಎಂದು ಆರೋಪಿಸಿದ ಅವರು ದೌರ್ಜನ್ಯ ಎಸಗಿದ ಎಲ್ಲಾ ಪೊಲೀಸರನ್ನು ಸೇವೆಯಿಂದ ವಜಾಗೊಳಿಸಬೇಕು ಎಂದ ಅವರು ಕೋಟ ಪ್ರಕರಣದಲ್ಲಿ ಹಿಂದುತ್ವದ ಹೆಸರಿನಲ್ಲಿರುವ ಹಿಂದೂ ಸಂಘಟನೆಗಳ ಮೌನ ಏಕೆ ಎಂದು ಪ್ರಶ್ನಿಸಿದರು. ದಸಂಸ (ಕೃಷ್ಣಪ್ಪ ಸ್ಥಾಪಿತ) ಮಾಜಿ ಸಂಚಾಲಕ ರಮೇಶ್ ಆರ್ ಮಾತನಾಡಿ ಕೋಟ ಪ್ರಕರಣ ರಾಜ್ಯ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿಯಾಗಿದೆ. ದಲಿತ ಸಮುದಾಯ ಮದುವೆ ಕಾರ್ಯಕ್ರಮವನ್ನು ಸಂಭ್ರಮಿಸುವುದು ತಪ್ಪೇ ಎಂದು ಪ್ರಶ್ನಿಸಿದರು.

ಹಿರಿಯ ಕಾರ್ಮಿಕ ನಾಯಕ , ನ್ಯಾಯವಾದಿ ಶಿವಕುಮಾರ್ ಎಸ್. ಎಂ ಮಾತನಾಡಿ ಕೋಟ ಪ್ರಕರಣ ನಾಗರಿಕ ಸಮಾಜದ ಅನಾಗರಿಕತೆಯನ್ನು ಎತ್ತಿ ತೋರಿಸಿದೆ. ರಾಜ್ಯ ಸರ್ಕಾರ ದೌರ್ಜನ್ಯವನ್ನು ನಿವೃತ್ತ ನ್ಯಾಯಾಧೀಶರ ಮೂಲಕ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯ ನೇತೃತ್ವವನ್ನು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಜಿಲ್ಲಾ ಸಂಚಾಲಕ ವಸಂತ ನಡ , ತಾಲೂಕು ಕಾರ್ಯದರ್ಶಿ ಜಯಾನಂದ ಪಿಲಿಕಲ , ದಸಂಸ ಅಂಬೇಡ್ಕರ್ ವಾದ ದ ನಾಗರಾಜ್ ಎಸ್ ಲಾಯಿಲ , ರಮೇಶ್ ಲಾಯಿಲ , ದಲಿತ ಹಕ್ಕುಗಳ ಸಮಿತಿ ಕಾರ್ಯದರ್ಶಿ ಕುಸುಮ ಮಾಚಾರ್ , ಡಿವೈಎಫ್ಐ ತಾಲೂಕು ಅಧ್ಯಕ್ಷ ಸುಜೀತ್ ಉಜಿರೆ , ಕರ್ನಾಟಕ ಪ್ರಾಂತ ರೈತ ಸಂಘದ ಗೋವಿಂದ ಗೌಡ ಕನ್ಯಾಡಿ , ನ್ಯಾಯವಾದಿ ಸುಕನ್ಯಾ ಹೆಚ್ ವಹಿಸಿದ್ದರು.

- Advertisement -
spot_img

Latest News

error: Content is protected !!