Saturday, June 6, 2026
Homeತಾಜಾ ಸುದ್ದಿಪುತ್ತೂರು: ಕಾಂಗ್ರೆಸ್ ನಾಯಕರ ವಿರುದ್ಧ ಇ.ಡಿ. ತನಿಖೆಗೆ ವಿರೋಧ: ಪುತ್ತೂರು ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ...

ಪುತ್ತೂರು: ಕಾಂಗ್ರೆಸ್ ನಾಯಕರ ವಿರುದ್ಧ ಇ.ಡಿ. ತನಿಖೆಗೆ ವಿರೋಧ: ಪುತ್ತೂರು ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ  

- Advertisement -
- Advertisement -

ಪುತ್ತೂರು: ಕಾಂಗ್ರೆಸ್‌ ನಾಯಕರ ವಿರುದ್ಧ ಇಡಿ ತನಿಖೆ ನಡೆಸುತ್ತಿರೋದನ್ನ ವಿರೋಧಿಸಿ ಪುತ್ತೂರು ಬ್ಲಾಕ್‌ ಕಾಂಗ್ರೆಸ್‌ ನೇತೃತ್ವದಲ್ಲಿ ಅಮರ್ ಜವಾನ್ ಜ್ಯೋತಿ ಬಳಿ ಪ್ರತಿಭಟನೆ ನಡೆಯಿತು. ಬಿಜೆಪಿ ಕಾಂಗ್ರೆಸ್‌ ನಾಯಕರ ವಿರುದ್ಧ ದ್ವೇಷದ ರಾಜಕಾರಣ ಮಾಡ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಕಾಂಗ್ರೆಸ್‌ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ರು.

ಈ ವೇಳೆ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಶ್ವನಾಥ್ ರೈ, ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಆಸ್ತಿಯನ್ನು ದುರ್ಬಳಕೆ ಮಾಡಿದ್ದಾರೆ ಎಂಬ ಆರೋಪದಡಿ ಕಾಂಗ್ರೆಸ್ ನಾಯಕರ ಮೇಲೆ ಹಗೆ ಸಾಧಿಸುವ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಡುತ್ತಿದ್ದು, ಇದರಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂದರು.

- Advertisement -

Latest News

error: Content is protected !!