- Advertisement -
- Advertisement -
ಉಡುಪಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಬೇಕು. ಇನ್ನು ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಸೂಚನೆ ನೀಡಿದ್ದರಿಂದ ಸಿದ್ದರಾಮಯ್ಯ ಅವರು ಯಾವುದೇ ಹುದ್ದೆಯಲ್ಲಿ ಇರಬಾರದು. ತಕ್ಷಣವೇ ರಾಜೀನಾಮೆ ನೀಡಿ, ತನಿಖೆ ಆಗುವ ತನಕ ಮುಖ್ಯಮಂತ್ರಿ ಸ್ಥಾನದಿಂದ ಕೆಳಕ್ಕಿಳಿಯಬೇಕು ಎಂದು ಮಾಜಿ ಸಚಿವ, ಶಾಸಕ ವಿ ಸುನೀಲ್ ಕುಮಾರ್ ಆಗ್ರಹಿಸಿದರು.
ಅವರು ಸುದ್ದಿಗಾರರೊಂದಿಗೆ ಮಾತನಾಡಿ, ‘ರಾಜ್ಯಪಾಲರನ್ನು ಪ್ರಶ್ನೆ ಮಾಡುತ್ತಿರುವ ಕಾಂಗ್ರೆಸ್ ಮುಂದಿನ ದಿನಗಳಲ್ಲಿ ನ್ಯಾಯಾಲಯದ ನಿಲುವು ಪ್ರಶ್ನೆ ಮಾಡುವ ಭಂಡತನ ತೋರಬಹುದು ಎಂದರು. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ಧರಾಮಯ್ಯ ರಾಜಿನಾಮೆ ನೀಡಬೇಕು.ರಾಜೀನಾಮೆ ನೀಡದಿದ್ದರೆ ಒಂದೆರೆಡು ದಿನದಲ್ಲಿ ಬಿಜೆಪಿ ಜಿಲ್ಲೆ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಲಿದೆ,’ ಎಂದು ತಿಳಿಸಿದರು.
- Advertisement -