Saturday, June 6, 2026
Homeಕರಾವಳಿಮಂಗಳೂರು: ಬೀದಿ ಬದಿ ವ್ಯಾಪಾರಿಗಳ ಅನಿರ್ಧಿಷ್ಟಾವಧಿ ಪ್ರತಿಭಟನೆಗೆ ಮಣಿದ ಮ.ನ.ಪಾ ಅಧಿಕಾರಿಗಳು

ಮಂಗಳೂರು: ಬೀದಿ ಬದಿ ವ್ಯಾಪಾರಿಗಳ ಅನಿರ್ಧಿಷ್ಟಾವಧಿ ಪ್ರತಿಭಟನೆಗೆ ಮಣಿದ ಮ.ನ.ಪಾ ಅಧಿಕಾರಿಗಳು

- Advertisement -
- Advertisement -

ಮಂಗಳೂರು: ಬೀದಿ ಬದಿ ವ್ಯಾಪಾರಿಗಳ ಅನಿರ್ಧಿಷ್ಟಾವಧಿ ಪ್ರತಿಭಟನೆಗೆ ಮ.ನ.ಪಾ ಅಧಿಕಾರಿಗಳು ಮಣಿದಿದ್ದು, ಗೂಡಂಗಡಿ ತೆರವು ಕಾರ್ಯಾಚರಣೆಯನ್ನು ಮುಂದಿನ ತೀರ್ಮಾನದವರೆಗೆ ಹಿಂಪಡೆಯುತ್ತೇವೆ ಎಂದು ಭರವಸೆ ನೀಡಿದ್ದಾರೆ.

ಕೆಲವು ದಿನಗಳಿಂದ ಮನಪಾ ವತಿಯಿಂದ ಬೀದಿಬದಿ ವ್ಯಾಪಾರಸ್ಥರನ್ನು ಏಕಾಏಕಿ ತೆರವುಗೊಳಿಸಿದ ವಿರುದ್ಧ ದ.ಕ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘ ಹಾಗೂ ಸಿಐಟಿಯು ನೇತೃತ್ವದಲ್ಲಿ ಮಂಗಳೂರು ಮಹಾನಗರಪಾಲಿಕೆ ಮುಂಭಾಗ ಇಂದು ಬೆಳಗ್ಗೆಯಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸಿತ್ತು.

- Advertisement -

Latest News

error: Content is protected !!