- Advertisement -
![]()
- Advertisement -
ಪುತ್ತೂರು : ಅ.20 ರಂದು ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರು ಮಾಡಿದ ಭಾಷಣ , ಧಾರ್ಮಿಕ ದ್ವೇಷ ಪ್ರಚೋದಿಸುವ, ಮಹಿಳೆಯರ ಘನತೆಗೆ ಧಕ್ಕೆ ಉಂಟುಮಾಡುವ ಹಾಗೂ ಸಾರ್ವಜನಿಕ ಶಾಂತಿಗೆ ಅಪಾಯ ಉಂಟುಮಾಡುವಂತಿದೆ . ಅವರು ಹಿಂದೂ-ಮುಸ್ಲಿಂ ಸಮುದಾಯಗಳ ಬಗ್ಗೆ ಅವಮಾನಕಾರಿ ಹೇಳಿಕೆಗಳನ್ನು ನೀಡಿ, ಮತದಾರರ ಸಂಖ್ಯೆಯ ಉಲ್ಲೇಖ ಮಾಡಿ ಧಾರ್ಮಿಕ ವೈಮನಸ್ಸು ಉಂಟುಮಾಡಿದ್ದಾರೆ .ಅಲ್ಲದೇ ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣ ಖಾಸಗಿ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರಗೊಂಡಿದೆ ಎಂದು ಈಶ್ವರಿ ಪದ್ಮುಂಜ ಎಂಬವರು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಅದರಂತೆ ವಿಚಾರಣೆಗೆ ಹಾಜರಾಗಲು ಪ್ರಭಾಕರ ಭಟ್ ಕಲ್ಲಡ್ಕ ಇವರ ಮನೆಗೆ ನೋಟಿಸ್ ಜಾರಿ ಮಾಡಲಾಗಿದೆ.
- Advertisement -


