Thursday, June 4, 2026
Homeಕರಾವಳಿಉಡುಪಿನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯರ ಹಾಸ್ಟೆಲ್ ಶೌಚಾಲಯದ ಗೋಡೆಯಲ್ಲಿ ಪ್ರಚೋದನಾಕಾರಿ ಬರಹ; ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ...

ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯರ ಹಾಸ್ಟೆಲ್ ಶೌಚಾಲಯದ ಗೋಡೆಯಲ್ಲಿ ಪ್ರಚೋದನಾಕಾರಿ ಬರಹ; ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು

- Advertisement -
- Advertisement -

ಕಾರ್ಕಳ; ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯರ ಹಾಸ್ಟೆಲ್ ಶೌಚಾಲಯದ ಗೋಡೆಯಲ್ಲಿ ಪ್ರಚೋದನಾಕಾರಿ ಬರಹ ಬರೆದಿರುವ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಕುರಿತು ವೀಡಿಯೊ ಸಂದೇಶದ ಮೂಲಕ ಮಾಹಿತಿ ನೀಡಿರುವ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ಅವರು ನಿಟ್ಟೆ ಎಂಜಿನಿಯರಿಂಗ್ ಕಾಲೇಜಿನ ಮಹಿಳಾ ವಸತಿ ನಿಲಯದ ಶೌಚಾಲಯದ ಒಳಗಡೆ ಒಂದು ಪೆನ್ನನ್ನು ಇಟ್ಟು ಪ್ರಚೋದನಾಕಾರಿ ಹೇಳಿಕೆಗಳನ್ನು ಬರೆದಿರುತ್ತಾರೆ. ಅದು ಹಿಂದೂ ಮತ್ತು ಮುಸ್ಲಿಂ ಧರ್ಮಕ್ಕೆ ಧಕ್ಕೆ ತರುವ ರೀತಿಯಲ್ಲಿ ಬರೆಯಲಾಗಿದೆ. ಈ ಬಗ್ಗೆ ಹಾಸ್ಟೆಲಿನ ಮ್ಯಾನೇಜರ್ ಅವರು ಪೊಲೀಸರಿಗೆ ಶುಕ್ರವಾರ ಬೆಳಿಗ್ಗೆ ಮಾಹಿತಿ ನೀಡಿದ್ದು, ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನು ಯಾರೋ ಅಪರಿಚಿತ ವಿದ್ಯಾರ್ಥಿಗಳು ಬರೆದಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದ್ದು, ಇದರ ಬಗ್ಗೆ ಕೂಲಕುಂಷವಾಗಿ ತನಿಖೆ ನಡೆಸಿ ಯಾರು ಇದನ್ನು ಮಾಡಿದ್ದಾರೋ ಅವರ ವಿರುದ್ದ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

- Advertisement -

Latest News

error: Content is protected !!