Tuesday, June 6, 2023
Homeತಾಜಾ ಸುದ್ದಿಪಿಎಸ್‌ಐ ನೇಮಕಾತಿ ಹಗರಣ: ಸಿಐಡಿ ಬಲೆಗೆ ಬಿದ್ದ ಫಸ್ಟ್ ರ‍್ಯಾಂಕ್ ರಚನಾ

ಪಿಎಸ್‌ಐ ನೇಮಕಾತಿ ಹಗರಣ: ಸಿಐಡಿ ಬಲೆಗೆ ಬಿದ್ದ ಫಸ್ಟ್ ರ‍್ಯಾಂಕ್ ರಚನಾ

- Advertisement -
- Advertisement -

ಕಲಬುರಗಿ: ರಾಜ್ಯದಲ್ಲಿ ಸಂಚಲನ ಸೃಷ್ಟಿಸಿರುವ ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನ ಅರೆಸ್ಟ್ ಮಾಡಲಾಗಿದೆ. ಒಂದುವರೆ ತಿಂಗಳಿನಿಂದ ಸಿಐಡಿ ಅಧಿಕಾರಿಗಳನ್ನೇ ಆಟ ಆಡಿಸುತ್ತ ತಲೆಮರಿಸಿಕೊಂಡಿದ್ದ ಫಸ್ಟ್ ರ‍್ಯಾಂಕ್ ಅಭ್ಯರ್ಥಿ ಇದೀಗ ಲಾಕ್‌ ಅಗಿದ್ದಾರೆ.

ಮಹಿಳಾ ಕೋಟಾದಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದಿದ್ದ ರಚನಾ ಎಂಬ ಅಭ್ಯರ್ಥಿಯನ್ನು ಬಂಧಿಸಿದ್ದಾರೆ.

ಪಿಎಸ್‌ಐ ಮಹಿಳಾ ಕೋಟಾದಲ್ಲಿ ಮೊದಲ ರ‍್ಯಾಂಕ್ ಪಡೆದಿದ್ದ ರಚನಾ ಬಂಧಿತ ಆರೋಪಿಯಾಗಿದ್ದು, ವಿಶೇಷವೆನಂದರೆ ಪಿಎಸ್‌ಐ ಪರೀಕ್ಷಾ ಅಕ್ರಮ ಹೋರಾಟದಲ್ಲಿ ಮುಂಚೂಣಿ ಪಾತ್ರ ವಹಿಸಿದ್ದರು. ರಚನಾ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ಮೂಲದವಳಾಗಿದ್ದು, ಪಿಎಸ್‌ಐ ಹಗರಣ ಹೊರ ಬಂದಾಗಿನಿಂದ ನಾಪತ್ತೆಯಾಗಿದ್ದರು.‌ ಇದೀಗ ಮಹಾರಾಷ್ಟ್ರದ ಗಡಿಯಲ್ಲಿ ರಚನಾಳನ್ನ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -

Latest News

error: Content is protected !!