Saturday, June 6, 2026
Homeತಾಜಾ ಸುದ್ದಿಪಿಎಸ್‌ಐ ನೇಮಕಾತಿ ಹಗರಣ- ಮತ್ತೆ 12 ಮಂದಿ ಅರೆಸ್ಟ್

ಪಿಎಸ್‌ಐ ನೇಮಕಾತಿ ಹಗರಣ- ಮತ್ತೆ 12 ಮಂದಿ ಅರೆಸ್ಟ್

- Advertisement -
- Advertisement -

ಬೆಂಗಳೂರು: ಪಿಎಸ್‌ಐ ನೇಮಕಾತಿ ಹಗರಣ ಸಂಬಂಧ ಮತ್ತೆ 12 ಅಭ್ಯರ್ಥಿಗಳನ್ನು ಬೆಂಗಳೂರಿನಲ್ಲಿ ಸಿಐಡಿ ಪೊಲೀಸರು ಬಂಧಿಸಿದ್ದಾರೆ.

ನಗರದ 7 ಕೇಂದ್ರದಲ್ಲಿಅಕ್ರಮ ನಡೆದಿದ್ದು, ಇಲ್ಲಿ ಪರೀಕ್ಷೆ ಬರೆದ 22 ಅಭ್ಯರ್ಥಿಗಳ ಒಎಂಆರ್ ಪ್ರತಿಗಳ ಬಗ್ಗೆ ಅನುಮಾನವಿರುವ ಬಗ್ಗೆ ಸಿಐಡಿ ಸರ್ಕಾರಕ್ಕೆ ಮಾಹಿತಿ ನೀಡಿತ್ತು. ಇದೀಗ ಈ 22 ಮಂದಿಯಲ್ಲಿ 12 ಮಂದಿ ಬಂಧಿಸಲ್ಪಟ್ಟಿದ್ದಾರೆ. ಹಗರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಅವರನ್ನು ಶುಕ್ರವಾರ ಬಂಧಿಸಲಾಗಿತ್ತು.

ಪಿಎಸ್‌ಐ ನೇಮಕಾತಿ ಪರೀಕ್ಷೆಗಳು ರಾಜ್ಯದ 92 ಪರೀಕ್ಷಾ ಕೇಂದ್ರಗಳಲ್ಲಿ ನಡೆದಿದ್ದವು. ಕಲಬುರಗಿಯ ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಪರೀಕ್ಷೆ ಕೇಂದ್ರದಲ್ಲಿ ಪರೀಕ್ಷೆ ಬರೆದು ಆಯ್ಕೆಯಾದ 11 ಅಭ್ಯರ್ಥಿಗಳ ಪೈಕಿ 8 ಮಂದಿ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂಬ ಹಿನ್ನೆಲೆಯಲ್ಲಿ ಸಿಐಡಿ ತನಿಖೆ ನಡೆಯುತ್ತಿದೆ. ಈ ಅಕ್ರಮದಲ್ಲಿ ಭಾಗಿಯಾದ ಹಲವರನ್ನು ಈಗಾಗಲೇ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

- Advertisement -

Latest News

error: Content is protected !!