Thursday, May 2, 2024
Homeತಾಜಾ ಸುದ್ದಿನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

spot_img
- Advertisement -
- Advertisement -

ಬೆಂಗಳೂರು: ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ. ಈ ಬಗ್ಗೆ ಪ್ರಕಟಣೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದು, ಮಾರ್ಚ್ 2024ರ ದ್ವಿತೀಯ ಪಿಯುಸಿ ಪರೀಕ್ಷೆ- ನ್ನು ದಿನಾಂಕ:01/03/2024 ರಿಂದ 22/03/2024 ರವರೆಗೆ ನಡೆಸಲಾಯಿತು ಎಂದಿದೆ.

ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ. ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ: 10/04/2024 ರಂದು ಬೆಳಿಗ್ಗೆ 10:00 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ ಎಂದು ಹೇಳಿದ್ದಾರೆ.

ನಾಳೆ ಬೆಳಿಗ್ಗೆ 10 ಗಂಟೆಗೆ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ. ಆ ಬಳಿಕ ವಿದ್ಯಾರ್ಥಿಗಳು ಫಲಿತಾಂಶವನ್ನುhttps://karresults.nic.inಜಾಲತಾಣದಲ್ಲಿ ದಿನಾಂಕ:10/04/2024ರ ಬೆಳಿಗ್ಗೆ 11:00 ಗಂಟೆಯ ನಂತರ ವೀಕ್ಷಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!