Saturday, July 18, 2026
Homeತಾಜಾ ಸುದ್ದಿಜೂನ್ ಕೊನೆ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ

ಜೂನ್ ಕೊನೆ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ

- Advertisement -
- Advertisement -

ಬೆಂಗಳೂರು : ಜೂನ್ ಕೊನೆ ವಾರದಲ್ಲಿ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಎಂದು ಪಿಯು ಮಂಡಳಿ ನಿರ್ದೆಶಕ ಆರ್. ರಾಮಚಂದ್ರನ್ ಮಾಹಿತಿ ನೀಡಿದ್ದಾರೆ.

ಪ್ರತಿ ವರ್ಷದಂತೆ ಈ ಬಾರಿ ದ್ವಿತೀಯ ಪಿಯುಸಿ ಫಲಿತಾಂಶ ತಡವಾಗಲ್ಲ. ಈವರೆಗೆ ಪರೀಕ್ಷೆ ಮುಗಿದ ನಂತರ ಮೌಲ್ಯಮಾಪನ ಮಾಡಲಾಗುತ್ತಿತ್ತು. ಆದರೆ ಈ ಬಾರಿ ಒಂದೊಂದು ಪರೀಕ್ಷೆ ಮುಗಿಯುತ್ತಿದ್ದಂತೆ ಮೌಲ್ಯಮಾಪನ ಮಾಡಲಾಗುತ್ತಿದೆ. ಈ ವರ್ಷ ಏಪ್ರಿಲ್. ಮೇ ತಿಂಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಫಲಿತಾಂಶ ಬೇಗ ನೀಡಲು ರಜಾ ದಿನಗಳಲ್ಲೂ ಮೌಲ್ಯಮಾಪನ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಮೇ. 20 ರಿಂದ ಜೂನ್ 15 ರೊಳಗೆ ಮೌಲ್ಯಮಾಪನ ಕಾರ್ಯ ಪೂರ್ಣಗೊಳ್ಳಲಿದೆ. ಉನ್ನತ ಶಿಕ್ಷಣ ಹೋಗಲು ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

- Advertisement -

Latest News

error: Content is protected !!