Thursday, June 4, 2026
Homeಕರಾವಳಿಸುಳ್ಯ: ಬಿಸಿಎಂ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

ಸುಳ್ಯ: ಬಿಸಿಎಂ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

- Advertisement -
- Advertisement -

ಸುಳ್ಯ: ವಿದ್ಯಾರ್ಥಿನಿಯೊಬ್ಬಳು  ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಳ್ಯ ಕುರುಂಜಿಭಾಗ್ ಸಮೀಪ ಇರುವ ಬಿಸಿಎಂ ಹಾಸ್ಟೆಲ್ ನಲ್ಲಿ ನಡೆದಿದೆ. ಬೆಂಗಳೂರು ಮೂಲದ ಸುಳ್ಯ ಶಾರದಾ ಹೆಣ್ಮಕ್ಕಳ ಪದವಿ ಪೂರ್ವ ಕಾಲೇಜಿನ‌ಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಸೋನಿಯಾ (18) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.

ಈಕೆ ಬೆಂಗಳೂರು ರಾಮನಾಥ ಪುರದ, ಕೋರಮಂಗಲ ತಾಲೂಕಿನ ಮಾರ್ಲಮಂಗಲ ಗ್ರಾಮದ ಪುರುಷೋತ್ತಮ ಎಂಬವರ ಪುತ್ರಿ. ಸೋನಿಯಾ ಇಂದು ಕಾಲೇಜಿಗೆ ಹೋಗದೇ ಹಾಸ್ಟೇಲ್ ನಲ್ಲಿ ಉಳಿದುಕೊಂಡಿದ್ದಳು. ಮದ್ಯಾಹ್ನ ಆಕೆಯ ರೂಂ ನಲ್ಲಿದ್ದ ಇನ್ನೊಬ್ಬಳು ವಿದ್ಯಾರ್ಥಿನಿ ಊಟದ ತಟ್ಟೆ ತರಲೆಂದು ರೂಂ ಗೆ ಹೋದಾಗ ಬಾಗಿಲು ಹಾಕಿತ್ತು. ಬಾಗಿಲು ತಟ್ಟಿದ್ದರೂ ಬಾಗಿಲು ತೆರೆದಿರಲಿಲ್ಲ, ಆಕೆ ಮಲಗಿರಬಹುದು ಎಂದು ಭಾವಿಸಿ ಗೆಳತಿಯ ತಟ್ಟೆಯಲ್ಲಿ ಊಟ ಮುಗಿಸಿ ಮತ್ತೆ ರೂಮಿಗೆ ಬಂದಾಗಲೂ ಬಾಗಿಲು ತೆರೆಯದೇ ಇದ್ದ ಕಾರಣ ಸಂಶಯಗೊಂಡ ವಿದ್ಯಾರ್ಥಿನಿ ವಾರ್ಡನ್ ಗೆ ಮಾಹಿತಿ ನೀಡಿದ್ದು, ಇಲಾಖೆಯ ಸಿಬ್ಬಂದಿಗಳು ಬಂದು ಬಾಗಿಲು ಒಡೆದು ನೋಡಿದಾಗ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ.

ಸ್ಥಳಕ್ಕೆ ಪೋಲಿಸ್ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ, ಎಸ್ ಐ ದಿಲೀಪ್ ಕುಮಾರ್ , ಮೊದಲಾದವರು ಆಗಮಿಸಿದ್ದು ವಿದ್ಯಾರ್ಥಿನಿ ಮೃತದೇಹವನ್ನು ಮಹಜರಿಗೆ ಸಾಗಿಸಲಾಗಿದೆ.

- Advertisement -

Latest News

error: Content is protected !!