Sunday, October 18, 2026
Homeಕರಾವಳಿಬೆಳ್ತಂಗಡಿ;  ಹೃದಯಾಘಾತದಿಂದ ಪಿಯುಸಿ ವಿದ್ಯಾರ್ಥಿ ನಿಧನ

ಬೆಳ್ತಂಗಡಿ;  ಹೃದಯಾಘಾತದಿಂದ ಪಿಯುಸಿ ವಿದ್ಯಾರ್ಥಿ ನಿಧನ

- Advertisement -
- Advertisement -

ಬೆಳ್ತಂಗಡಿ;  ಹೃದಯಾಘಾತದಿಂದ ಪಿಯುಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಪಿಲಿಕಳ ಪಂಪ್ ಹೌಸ್ ಬಳಿ ನಡೆದಿದೆ. ಸಚಿನ್ (17) ಮೃತ ದುರ್ದೈವಿ.

ಮುಂಡಾಜೆ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಈತ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಎಂದು ಹೇಳಲಾಗಿದೆ.

ಇಂದು ಕಾಲೇಜಿಗೆ ರಜೆ ಇದ್ದರಿಂದ ಆತ ಮನೆಯಲ್ಲಿದ್ದ. ಈ ಸಂದರ್ಭ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದೆ. ಬಳಿಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಅವಳಿ ಮಕ್ಕಳ ಪೈಕಿ ಓರ್ವರಾಗಿರುವ ಸಚಿನ್ ತಂದೆ,ತಾಯಿ, ಹಾಗೂ ಇಬ್ಬರು ಸಹೋದರರನ್ನು ಅಗಲಿದ್ದಾರೆ.

- Advertisement -

Latest News

error: Content is protected !!