Sunday, June 7, 2026
Homeಕರಾವಳಿಮಂಗಳೂರು: ತಾಲೂಕು ಕಚೇರಿಯಲ್ಲಿ ಕೆಲಸ ದೊರಕಿಸಿಕೊಡುವುದಾಗಿ ವಂಚಿಸಿದವನಿಗೆ ಬಿತ್ತು ಗೂಸಾ

ಮಂಗಳೂರು: ತಾಲೂಕು ಕಚೇರಿಯಲ್ಲಿ ಕೆಲಸ ದೊರಕಿಸಿಕೊಡುವುದಾಗಿ ವಂಚಿಸಿದವನಿಗೆ ಬಿತ್ತು ಗೂಸಾ

- Advertisement -
- Advertisement -

ಮಂಗಳೂರು: ಫೇಸ್ ಬುಕ್ ಮೂಲಕ ಪರಿಚಯ ಮಾಡಿಸಿಕೊಂಡು ತಾಲೂಕು ಕಚೇರಿಯಲ್ಲಿ ಕೆಲಸ ದೊರಕಿಸಿಕೊಡುವುದಾಗಿ ಹೇಳಿ ಮಹಿಳೆಯರ ಸಹಿತ ಹಲವು ಮಂದಿಗೆ ವಂಚನೆಗೈದ ಆರೋಪಿಗೆ ಯುವಕರು ಥಳಿಸಿರುವ ಘಟನೆ ನಗರದ ಹೊರವಲಯದ ಮುಲ್ಕಿ ಸಮೀಪದ ಪುನರೂರು ಬಳಿ ನಡೆದಿದೆ.

ಪುನರೂರು ಎಂಬಲ್ಲಿನ ಜೀತು ಶೆಟ್ಟಿ ಅಲಿಯಾಸ್ ಅಜಯ್ ಶೆಟ್ಟಿ ಎಂಬಾತ, ತನಗೆ ಶಾಸಕ ಡಾ.ವೈ.ಭರತ್ ಶೆಟ್ಟಿಯವರ ಪರಿಚಯ ಇದೆ ಎಂದು ಏಳೆಂಟು ಮಂದಿಗೆ ನಂಬಿಸಿದ್ದಾನೆ. ಎಫ್ಬಿ ಮುಖಾಂತರ ಅವರನ್ನು ಪರಿಚಯಿಸಿಕೊಂಡು ತಾಲೂಕು ಆಫೀಸ್ ನಲ್ಲಿ ಕೆಲಸ ದೊರಕಿಸುವ ಭರವಸೆ ನೀಡಿದ್ದಾನೆ. ಅಲ್ಲದೆ ಉದ್ಯೋಗಾಕಾಂಕ್ಷಿಗಳಿಂದ 30 ಸಾವಿರ ರೂ. ನಿಂದ 2 ಲಕ್ಷ ರೂ. ವರೆಗೂ ಹಣ ಪಡೆದು ವಂಚನೆ ಮಾಡಿದ್ದಾನೆಂದು ಎಂದು ದೂರಿರುವ ಯುವಕರು ಹಲ್ಲೆ ನಡೆಸುತ್ತಿರುವ ವಿಡಿಯೋ ವೈರಲ್ ಆಗಿದೆ.

ಈತ ಇದೀಗ ಹಾಸನದ ಯುವತಿಯನ್ನು ಮದುವೆಯಾಗಿದ್ದು, ಆಕೆಯೂ ಈ ಕೃತ್ಯದಲ್ಲಿ ಬಾಗಿಯಾಗಿದ್ದಾಳೆಂದು ತಿಳಿದು ಬಂದಿದೆ.

- Advertisement -

Latest News

error: Content is protected !!