Sunday, June 7, 2026
Homeಕರಾವಳಿಉಡುಪಿಕಾರ್ಕಳ:ಯುವತಿಗೆ ಕಿರುಕುಳ ನೀಡುತ್ತಿದ್ದಾತನಿಗೆ ಸಾರ್ವಜನಿಕರಿಂದ ಧರ್ಮದೇಟು

ಕಾರ್ಕಳ:ಯುವತಿಗೆ ಕಿರುಕುಳ ನೀಡುತ್ತಿದ್ದಾತನಿಗೆ ಸಾರ್ವಜನಿಕರಿಂದ ಧರ್ಮದೇಟು

- Advertisement -
- Advertisement -

ಕಾರ್ಕಳ:ಯುವತಿಗೆ ಕಿರುಕುಳ ನೀಡುತ್ತಿದ್ದಾತನಿಗೆ ಸಾರ್ವಜನಿಕರು ಧರ್ಮದೇಟು ನೀಡಿದ ಘಟನೆ ಕಾರ್ಕಳ ಬಸ್ ನಿಲ್ದಾಣದಲ್ಲಿ ನಡೆದಿದೆ.

ಕಾರ್ಕಳದ ಖಾಸಗಿ ಪೈನಾನ್ಸ್ ಒಂದರಲ್ಲಿ ಅಕೌಂಟೆಂಟ್ ಆಗಿದ್ದ ನಂದಳಿಕೆಯ ಯುವತಿಗೆ ಇರ್ವತ್ತೂರಿನ ಜಗದೀಶ್ ಪೂಜಾರಿ ಎಂಬಾತ  ವಿನಾಕಾರಣ ಕಿರುಕುಳ ನೀಡುತ್ತಿದ್ದ. ಈತನನ್ನು ಸ್ಥಳೀಯರು ಹಿಡಿದು ಧರ್ಮದೇಟು ನೀಡಿದ್ದಾರೆ.

ಬುಧವಾರ ಸಂಜೆ ಯುವತಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಆರೋಪಿ ಆಕೆಯನ್ನು ಹಿಂಬಾಲಿಸಿ ಕಿರುಕುಳ ನೀಡಿದಾಗ ಸ್ಥಳೀಯರು ಆತನನ್ನು ಹಿಡಿದು ಎಳೆದಾಡಿ ಹಿಗ್ಗಾಮುಗ್ಗಾ ಬೈದು ಮುಖಕ್ಕೆ ಮಂಗಳಾರತಿ ಮಾಡಿದ್ದಾರೆ. ಈ ಘಟನೆಯ ಬಳಿಕ ಯುವತಿ ಈತನ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ದೂರು ನೀಡಿದ್ದು, ಆರೋಪಿ‌ ಜಗದೀಶ್ ಪೂಜಾರಿ ವಿರುದ್ಧ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!