Friday, June 5, 2026
Homeಕರಾವಳಿಬೆಳ್ತಂಗಡಿ;  ಸಾರ್ವಜನಿಕ ಪ್ರಚಾರ ಸಭೆಗೆ ಚಾಲನೆ ನೀಡಿದ ಹರೀಶ್ ಪೂಂಜ

ಬೆಳ್ತಂಗಡಿ;  ಸಾರ್ವಜನಿಕ ಪ್ರಚಾರ ಸಭೆಗೆ ಚಾಲನೆ ನೀಡಿದ ಹರೀಶ್ ಪೂಂಜ

- Advertisement -
- Advertisement -

ಬೆಳ್ತಂಗಡಿ; ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ 1.04.2023 ರಂದು ಪಡಂಗಡಿಯಲ್ಲಿ ನಡೆದ ಮೊದಲ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರು ಭಾಗಿಯಾದರು.

ಸಾರ್ವಜನಿಕಸಭೆಯಲ್ಲಿ ಸಮಾಜಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸಪೂಜಾರಿ ಅವರು ಮಾತನಾಡಿ ಬೆಳ್ತಂಗಡಿಕ್ಷೇತ್ರ ಈಗ ರಾಜ್ಯಕ್ಕೆ ಮಾದರಿಯಾಗಿ ನಿಂತಿದೆ. ಅಭಿವೃದ್ಧಿಯ ಮಹಾಪರ್ವವೇ ನಡೆದಿದೆ. ಬೆಳ್ತಂಗಡಿಯನ್ನು ಮತ್ತಷ್ಟು ಬೆಳಗಲು ಕ್ಷೇತ್ರದ ಜನತೆ ಮತ್ತೊಂದು ಬಾರಿ ಹರೀಶ್ ಪೂಂಜ ಅವರನ್ನು ಗೆಲ್ಲಿಸುವಂತೆ ಕರೆ ನೀಡಿದರು‌.

ಶಾಸಕ ಹರೀಶ್ ಪೂಂಜ ಮಾತನಾಡಿ, ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿಕಾರ್ಯಗಳನ್ನು, ಬಿಜೆಪಿ ಸರ್ಕಾರದ ಸಾಧನೆಗಳನ್ನು ಜನತೆಯ ಮುಂದಿಟ್ಟು, ಕ್ಷೇತ್ರದ ಜನರ ಸೇವೆ ಮಾಡಲು ಮತ್ತೊಂದು ಅವಕಾಶ ನೀಡುವಂತೆ ಕೋರಿಕೊಂಡರು‌

ಸಭೆಯಲ್ಲಿ ಮಂಡಲ ಬಿಜೆಪಿ ಅಧ್ಯಕ್ಷರಾದ ಜಯಂತ್ ಕೋಟ್ಯಾನ್, ಅಭ್ಯರ್ಥಿ ಪ್ರಮುಖ್‌ ಜಯಾನಂದ್‌ ಗೌಡ, ಮಾಜಿ ಮಂಡಲ ಅಧ್ಯಕ್ಷರಾದ ಕುಶಾಲಪ್ಪಗೌಡ, ಮಂಡಲ ಪದಾಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಮತ್ತು ಅಪಾರಸಂಖ್ಯೆಯಲ್ಲಿ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -

Latest News

error: Content is protected !!