Sunday, June 7, 2026
Homeತಾಜಾ ಸುದ್ದಿಸಾರ್ವಜನಿಕ ಉದ್ದಿಮೆಗಳ ಇಲಾಖೆ ರದ್ದುಪಡಿಸಿ ರಾಜ್ಯ ಸರ್ಕಾರ ಆದೇಶ

ಸಾರ್ವಜನಿಕ ಉದ್ದಿಮೆಗಳ ಇಲಾಖೆ ರದ್ದುಪಡಿಸಿ ರಾಜ್ಯ ಸರ್ಕಾರ ಆದೇಶ

- Advertisement -
- Advertisement -

ಬೆಂಗಳೂರು: ಸಾರ್ವಜನಿಕ ಉದ್ದಿಮೆಗಳ ಇಲಾಖೆಯನ್ನು ರದ್ದುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಸಚಿವ ಸಂಪುಟ ಉಪಸಮಿತಿ ಶಿಫಾರಸಿನ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಸಾರ್ವಜನಿಕ ಉದ್ದಿಮೆಗಳ ಇಲಾಖೆಯಲ್ಲಿ ‌ನಿರ್ವಹಿಸುತ್ತಿದ್ದ ವಿಷಯಗಳನ್ನು ಆರ್ಥಿಕ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ.ರಾಜ್ಯ ಸರ್ಕಾರದಲ್ಲಿ ವಿವಿಧ ಇಲಾಖೆಗಳ ವಿಲೀನಾತಿ, ರದ್ದುಗೊಳಿಸುವಿಕೆ ಸಂಬಂಧ ರಚಿಸಲಾಗಿರುವ ಸಚಿವ ಸಂಪುಟ ಉಪಸಮಿತಿ ಸಾರ್ವಜನಿಕ ಉದ್ದಿಮೆಗಳ ಇಲಾಖೆಯನ್ನು ರದ್ದುಗೊಳಿಸುವಂತೆ ಶಿಫಾರಸು ಮಾಡಿತ್ತು.ಈ ಸಂಬಂಧ ಮೇ 25 ರಂದು ರಾಜ್ಯ ಸರ್ಕಾರ ರದ್ದತಿ ಆದೇಶ ಹೊರಡಿಸಿದೆ.

- Advertisement -

Latest News

error: Content is protected !!