Friday, May 17, 2024
Homeಕರಾವಳಿದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಸಿಕೆ ಅಭಿಯಾನಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ: ದ.ಕ. ಜಿಲ್ಲಾ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಸಿಕೆ ಅಭಿಯಾನಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ: ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ| ಕಿಶೋರ್‌ ಕುಮಾರ್‌

spot_img
- Advertisement -
- Advertisement -

ಮಂಗಳೂರು: ಕೋವಿಡ್‌ ಲಸಿಕೆ ಅಭಿಯಾನಕ್ಕೆ ದ.ಕ. ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ದೊರಕುತ್ತಿದ್ದು, ಜಿಲ್ಲೆಯ ಶೇ. 75ರಷ್ಟು ಮಂದಿ ಈಗಾಗಲೇ ಮೊದಲ ಡೋಸ್‌ ಲಸಿಕೆ ಪಡೆದಿದ್ದು, 4.5 ಲಕ್ಷ ಮಂದಿ ಲಸಿಕೆ ಪಡೆಯಲು ಬಾಕಿ ಇದ್ದಾರೆ.

ಈವರೆಗೆ ಜಿಲ್ಲೆಯ 18,06,554 ಮೊದಲ ಡೋಸ್‌ ಟಾರ್ಗೆಟ್‌ನಲ್ಲಿ 13,50,937 ಮಂದಿಗೆ ಲಸಿಕೆ ನೀಡಲಾಗಿದೆ. ಒಟ್ಟು 4,55,617 ಮಂದಿ ಮೊದಲ ಡೋಸ್‌ ಲಸಿಕೆ ಪಡೆಯಲು ಬಾಕಿ ಇದ್ದಾರೆ. ಅದೇ ರೀತಿ, 4,62,077 ಮಂದಿ ಎರಡೂ ಡೋಸ್‌ ಲಸಿಕೆ ಪಡೆದುಕೊಂಡಿದ್ದು, 8,88,860 ಮಂದಿ ಬಾಕಿ ಇದ್ದಾರೆ.

ಜಿಲ್ಲೆಯಲ್ಲಿ ಲಸಿಕೆ ಅಭಿಯಾನ ಆರಂಭವಾದಾಗಿನಿಂದ ಒಟ್ಟು 18 ಲಕ್ಷ ಮಂದಿಗೆ ಮೊದಲ ಮತ್ತು ಎರಡನೇ ಡೋಸ್‌ ಲಸಿಕೆ ನೀಡಲಾಗಿದೆ. ಕಳೆದ ಒಂದೂವರೆ ತಿಂಗಳಿನಲ್ಲೇ 6.5 ಲಕ್ಷ ಮಂದಿಗೆ ಲಸಿಕೆ ನೀಡಲಾಗಿದೆ. 2021ರ ಆಗಸ್ಟ್‌ 1 ರಿಂದ 31ರ ವರೆಗೆ ಜಿಲ್ಲೆಯಲ್ಲಿ 4,18,851 ಮಂದಿಗೆ ಲಸಿಕೆ ನೀಡಲಾಗಿದೆ. ಅದೇ ರೀತಿ, ಸೆ. 1 ರಿಂದ 8ರ ವರೆಗೆ ಒಂದೇ ವಾರದಲ್ಲಿ 2,33,007 ಮಂದಿಗೆ ಲಸಿಕೆ ನೀಡಲಾಗಿದೆ. ಇದರೊಂದಿಗೆ ಈವರೆಗೆ ಒಟ್ಟು ನೀಡಿದ ಲಸಿಕೆಯ ಶೇ. 36.11ರಷ್ಟು ಮಂದಿ ಕೇವಲ ಒಂದೂವರೆ ತಿಂಗಳಲ್ಲಿ ಲಸಿಕೆ ನೀಡಿದಂತಾಗಿದೆ.

ರಾಜ್ಯದಲ್ಲಿ ಅತೀ ಹೆಚ್ಚು ಕೋವಿಡ್‌ ರೋಗ ನಿರೋಧಕ ಲಸಿಕೆ ನೀಡಿದ ಜಿಲ್ಲೆಗಳ ಪೈಕಿ ದ.ಕ. ಜಿಲ್ಲೆ ನಾಲ್ಕನೇ ಸ್ಥಾನ ಪಡೆದಿದೆ. ಬಿಬಿಎಂಪಿ ಮೊದಲ ಸ್ಥಾನದಲ್ಲಿದ್ದರೆ, ಬೆಳಗಾವಿ ಎರಡನೇ ಸ್ಥಾನ, ಮೈಸೂರು ಮೂರನೇ ಸ್ಥಾನ ಮತ್ತು ದಕ್ಷಿಣ ಕನ್ನಡ ಜಿಲ್ಲೆ ನಾಲ್ಕನೇ ಸ್ಥಾನ ಪಡೆದಿದೆ. ಅದರಲ್ಲೂ ಕೆಲ ದಿನಗಳಿಂದ ದ.ಕ. ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ನೀಡಲಾಗುತ್ತಿದೆ. ಸೆ. 8ರಂದು ಕೂಡ ಬಿಬಿಎಂಪಿ ವ್ಯಾಪ್ತಿ ಹೊರತುಪಡಿಸಿ ದ.ಕ. ಜಿಲ್ಲೆ ಎರಡನೇ ಸ್ಥಾನದಲ್ಲಿತ್ತು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಸಿಕೆ ಅಭಿಯಾನಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಜುಲೈ ತಿಂಗಳಿಗೆ ಹೋಲಿಸಿದರೆ ಆಗಸ್ಟ್‌ ತಿಂಗಳಿನಲ್ಲಿ ಜಿಲ್ಲೆಗೆ ಲಸಿಕೆ ಸರಬರಾಜು ಹೆಚ್ಚಾಗಿದೆ. ಅದೇ ರೀತಿ, ಲಸಿಕೆ ಫಲಾನುಭವಿಗಳು ಕೂಡ ಹೆಚ್ಚಾಗುತ್ತಿದ್ದು, ಜಿಲ್ಲೆಯ ಶೇ.75ರಷ್ಟು ಮಂದಿ ಈಗಾಗಲೇ ಮೊದಲ ಡೋಸ್‌ ಲಸಿಕೆ ಪಡೆದಿದ್ದಾರೆ. 4.5 ಲಕ್ಷ ಮಂದಿ ಲಸಿಕೆ ಪಡೆಯಲು ಬಾಕಿ ಇದ್ದಾರೆ. ಈಗಾಗಲೇ ಪ್ರತೀ ಬುಧವಾರ ಲಸಿಕಾ ಮಹಾ ಅಭಿಯಾನ ನಡೆಯಲಿದೆ ಅಂತ ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ| ಕಿಶೋರ್‌ ಕುಮಾರ್‌ ಅವ್ರು ಹೇಳಿದ್ದಾರೆ.

- Advertisement -
spot_img

Latest News

error: Content is protected !!