Wednesday, June 19, 2024
Homeಇತರಅಪಘಾತ: ಪಬ್ಲಿಕ್ ಟಿವಿಯ ಜಿಲ್ಲಾ ವರದಿಗಾರ ನಿಧನ

ಅಪಘಾತ: ಪಬ್ಲಿಕ್ ಟಿವಿಯ ಜಿಲ್ಲಾ ವರದಿಗಾರ ನಿಧನ

spot_img
- Advertisement -
- Advertisement -

ರಾಮನಗರ: ಎಟಿಎಂಗೆ ಹಣ ತುಂಬುವ ವಾಹನ‌ ಡಿಕ್ಕಿ ಹೊಡೆದು ಅಪಘಾತದಲ್ಲಿ ಪಬ್ಲಿಕ್ ಟಿವಿಯ ಕರ್ತವ್ಯ ನಿರತ ವರದಿಗಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರದಲ್ಲಿ ನಡೆದಿದೆ. ರಾಮನಗರ ಜೈಲಿನಿಂದ ಕೈದಿಗಳನ್ನು ಬೆಂಗಳೂರಿಗೆ ಸ್ಥಳಾಂತರಿಸುತ್ತಿದ್ದ ಸುದ್ದಿ ವರದಿ ಮಾಡುತ್ತಿದ್ದ ಸಂದರ್ಭ, ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿ ಪಬ್ಲಿಕ್ ಟಿ.ವಿ. ರಾಮನಗರ ಜಿಲ್ಲಾ ವರದಿಗಾರ ಹನುಮಂತು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಹನುಮಂತು ಅವರು ಕಳೆದ 6 ವರ್ಷಗಳಿಂದ ರಾಮನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರಿಗೆ ವಿವಾಹವಾಗಿ ಮೂರು ವರ್ಷವಾಗಿದ್ದು, ಒಂದು ವರ್ಷದ ಮಗುವಿದೆ. ಹನುಮಂತು ಅವರ ನಿಧನಕ್ಕೆ ರಾಮನಗರ ಜಿಲ್ಲಾ ಪತ್ರಕರ್ತ ಸಹೋದ್ಯೋಗಿಗಳು ಕಂಬನಿ‌ ಮಿಡಿದಿದ್ದಾರೆ.
ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹಾಗೂ ರಾಮನಗರ ಶಾಸಕರಾದ ಅನಿತಾ ಕುಮಾರಸ್ವಾಮಿ ಅವರು ವರದಿಗಾರ ಹನುಮಂತು ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಹನುಮಂತು ಅವರ ಕುಟುಂಬಕ್ಕೆ ವೈಯಕ್ತಿಕ 5 ಲಕ್ಷ ಪರಿಹಾರ ಘೋಷಿಸಿದ್ದು, ಆರೋಗ್ಯ ಸಮಸ್ಯೆ ಇರುವ ಹನುಮಂತು ಅವರ ಮಗುವಿನ ಸಂಪೂರ್ಣ ಚಿಕಿತ್ಸೆಯ ಹೊಣೆ ಹೊರುವುದಾಗಿ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!